ಕೋವಿಡ್-19: ಏ. 26 ರಿಂದ ತಮಿಳುನಾಡಿನಲ್ಲಿ ಕಠಿಣ ನಿರ್ಬಂಧಗಳು ಜಾರಿ, ಏನಿರುತ್ತೆ? ಏನಿರಲ್ಲ?

ತಮಿಳುನಾಡಿನಲ್ಲಿ ಕೋವಿಡ್ -19 ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ರಾಜ್ಯಾದ್ಯಂತ ಸೋಮವಾರ ಬೆಳಗ್ಗೆಯಿಂದ ಕಠಿಣ ನಿರ್ಬಂಧಗಳನ್ನು ಪ್ರಕಟಿಸಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ತಮಿಳುನಾಡಿನಲ್ಲಿ ಕೋವಿಡ್ -19 ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ರಾಜ್ಯಾದ್ಯಂತ ಸೋಮವಾರ ಬೆಳಗ್ಗೆಯಿಂದ ಕಠಿಣ ನಿರ್ಬಂಧಗಳನ್ನು ಪ್ರಕಟಿಸಲಾಗಿದೆ. 

ಏಪ್ರಿಲ್ 26 ರಿಂದ ಚಿತ್ರಮಂದಿರಗಳು, ಜಿಮ್‌ಗಳು, ಬಾರ್‌ಗಳು, ಮನರಂಜನಾ ಕ್ಲಬ್‌ಗಳು, ಸಭಾಂಗಣಗಳು ಮತ್ತು ಕಾನ್ಫರೆನ್ಸ್ ಹಾಲ್‌ಗಳನ್ನು ಬಂದ್ ಮಾಡಲಾಗುತ್ತಿದೆ ಎಂದು ಶನಿವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

ದೊಡ್ಡ ಸ್ವರೂಪದ ಅಂಗಡಿಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮಾಲ್‌ಗಳು ಸಹ ಮುಚ್ಚಲ್ಪಡುತ್ತವೆ. ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಅನುಸರಿಸಿ ಸ್ವತಂತ್ರ ಕಿರಾಣಿ ಮತ್ತು ತರಕಾರಿ ಅಂಗಡಿಗಳನ್ನು(ಮಾಲ್‌ಗಳಲ್ಲಿರುವ ಅಂಗಡಿಗಳನ್ನು ಹೊರತುಪಡಿಸಿ) ಕಾರ್ಯನಿರ್ವಹಿಸಲು ಅನುಮತಿಸಲಾಗುವುದು. ಡಿಪಾರ್ಟ್ಮೆಂಟ್ ಸ್ಟೋರ್ಗಳು ಹವಾನಿಯಂತ್ರಣವಿಲ್ಲದೆ ಮತ್ತು ಶೇ. 50 ರಷ್ಟು ಗ್ರಾಹಕರೊಂದಿಗೆ ಕಾರ್ಯನಿರ್ವಹಿಸಬಹುದು ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಚೆನ್ನೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬ್ಯೂಟಿ ಪಾರ್ಲರ್‌ಗಳು, ಸ್ಪಾಗಳು, ಸಲೂನ್‌ಗಳು ಮತ್ತು ಹೇರ್ ಕಟಿಂಗ್ ಶಾಪ್ ಗಳನ್ನು ತೆರೆಯಲು ಅನುಮತಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೆಸ್ಟೋರೆಂಟ್‌ಗಳಲ್ಲಿ ಕೇವಲ ಪಾರ್ಸಲ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಚಹಾ ಅಂಗಡಿಗಳಿಗೆ ಅವಕಾಶವಿರುತ್ತದೆ. ಹೋಟೆಲ್‌ಗಳು ಮತ್ತು ವಸತಿಗೃಹಗಳಲ್ಲಿ, ಆಯಾ ಕೋಣೆಗಳಲ್ಲಿ ಆಹಾರವನ್ನು ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com