ಜನ 'ಕೋವಿಡ್ ಕಿ ಬಾತ್' ಬಗ್ಗೆ ಆಸಕ್ತಿ ಹೊಂದಿದ್ದಾರೆ, 'ಮನ್ ಕಿ ಬಾತ್' ಬಗ್ಗೆ ಅಲ್ಲ: ಮೋದಿಗೆ ಮಮತಾ ಟಾಂಗ್

ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮದ ಬಗ್ಗೆಆಸಕ್ತಿ ಇಲ್ಲ, 'ಕೋವಿಡ್ ಕಿ ಬಾತ್' ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ....
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಬಹರಾಂಪುರ: ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮದ ಬಗ್ಗೆಆಸಕ್ತಿ ಇಲ್ಲ, 'ಕೋವಿಡ್ ಕಿ ಬಾತ್' ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊರೋನಾ ಅಲೆ ಮತ್ತಷ್ಟು ತೀವ್ರವಾಗಿದ್ದು, ಲಸಿಕೆ ಮತ್ತು ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದ ಲಕ್ಷಾಂತರ ಜನ ಉಸಿರಾಡಲು ಪರದಾಡುತ್ತಿದ್ದಾರೆ ಎಂದು ಮಮತಾ ಹೇಳಿದ್ದಾರೆ.

ಇಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬ್ಯಾನರ್ಜಿ, ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಎದುರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು "ಬಂಗಾಳದಲ್ಲಿ ಅಧಿಕಾರಕ್ಕೆ ಬರುವ ಮಾರ್ಗಗಳನ್ನು ಹುಡುಕುವುದರಲ್ಲಿ ನಿರತರಾಗಿದ್ದಾರೆ" ಎಂದು ಆರೋಪಿಸಿದರು.

ಇಂದು ತಮ್ಮ ಮಾಸಿಕ ರೇಡಿಯೊ ಪ್ರಸಾರ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ "ಚಂಡಮಾರುತ" ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯುವಂತೆ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com