ಪಶ್ಚಿಮ ಬಂಗಾಳ: ಕೊರೋನಾ ಸೋಂಕಿನಿಂದ ಖರ್ದಹ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಸಾವು
ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.
Published: 25th April 2021 12:39 PM | Last Updated: 25th April 2021 12:49 PM | A+A A-

ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದಿದ್ದು, ಕಾಜಲ್ ಸಿನ್ಹಾ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅತ್ಯಂತ ದುಃಖಕರ ಹಾಗೂ ಆಘಾತದ ವಿಚಾರವಾಗಿದೆ. ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸಿನ್ಹಾ ಅವರು ತಮ್ಮ ಜೀವನವನ್ನು ಜನರ ಸೇವೆಗೆ ಅರ್ಪಿಸಿದರು ಮತ್ತು ದಣಿವರಿಯದ ಅಭಿಯಾನವನ್ನು ನಡೆಸಿದ್ದರು. ಪಕ್ಷದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಾಗಿದ್ದರು. ಅವಕ ಕುಟುಂಬ ಹಾಗೂ ಅಭಿಮಾನಗಳಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.