ಚರ್ಚೆ ನಡೆಸಿದ್ದು ಸಾಕು, ಲಸಿಕೆ ಉಚಿತವಾಗಿ ನೀಡಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಸರ್ಕಾರ ಭಾರತವನ್ನು ಬಲಿಪಶು ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಸರ್ಕಾರ ಭಾರತವನ್ನು ಬಲಿಪಶು ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಲಸಿಕೆ ಉಚಿತವಾಗಿ ನೀಡಬೇಕೆ ಬೇಡವೇ ಎಂಬುದು ಚರ್ಚೆ ಮಾಡುವ ವಿಷಯವಲ್ಲ, ಹೀಗಾಗಿ ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಕೋವಿಡ್ 19 ಲಸಿಕೆಗೆ ಎಷ್ಟು ಹಣ ನಿಗದಿ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಲಸಿಕೆಗೆ ಹಣ ನೀಡುವ ಚರ್ಚೆ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ.

ಉದಾಹರಣೆಗೆ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹ 600 ಕ್ಕೆ ಮಾರಾಟ ಮಾಡಲಿದೆ ಎಂದು ಹೇಳಿದೆ. ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ರಾಜ್ಯ ಸರ್ಕಾರಗಳಿಗೆ 600 ರು. ಮತ್ತು ಖಾಸಗಿ ಆಸ್ಪತ್ರೆಗಳಿಗೆ 1,200 ರು ಗೆ ನೀಡಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com