ಭಯಪಡುವ ಅಗತ್ಯವಿಲ್ಲ, ದೇಶದಲ್ಲಿ ಸಾಕಷ್ಟು ಆಕ್ಸಿಜನ್ ಸ್ಟಾಕ್ ಇದೆ: ಕೇಂದ್ರ

ದೇಶದಲ್ಲಿ ಸಾಕಷ್ಟು ವೈದ್ಯಕೀಯ ಆಮ್ಲಜನಕವಿದೆ, ಆದರೆ ಆಕ್ಸಿಜನ್ ಉತ್ಪಾದಕ ರಾಜ್ಯಗಳಿಂದ ಹೆಚ್ಚಿನ ಬೇಡಿಕೆಯಿರುವ ಪ್ರದೇಶಗಳಿಗೆ ಸಾಗಿಸುವುದು ಸಮಸ್ಯೆಯಾಗಿದ್ದು
ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು
ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಸಾಕಷ್ಟು ವೈದ್ಯಕೀಯ ಆಮ್ಲಜನಕವಿದೆ, ಆದರೆ ಆಕ್ಸಿಜನ್ ಉತ್ಪಾದಕ ರಾಜ್ಯಗಳಿಂದ ಹೆಚ್ಚಿನ ಬೇಡಿಕೆಯಿರುವ ಪ್ರದೇಶಗಳಿಗೆ ಸಾಗಿಸುವುದು ಸಮಸ್ಯೆಯಾಗಿದ್ದು, ಅದನ್ನು ಸರ್ಕಾರ ಪರಿಹರಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ತಿಳಿಸಿದೆ.

ಖಾಲಿ ಟ್ಯಾಂಕರ್‌ಗಳನ್ನು ಸಾಗಿಸುತ್ತಿರುವ ಭಾರತೀಯ ವಾಯುಪಡೆಯ ವಿಮಾನದ ಸಹಾಯವನ್ನು ತೆಗೆದುಕೊಳ್ಳುವ ಮೂಲಕ ಆಮ್ಲಜನಕ ಸಾಗಿಸುವ ಟ್ಯಾಂಕರ್‌ಗಳ ವಹಿವಾಟು ಸಮಯವನ್ನು 4-5 ದಿನಗಳಿಂದ 1-2 ಗಂಟೆಗಳವರೆಗೆ ಕಡಿಮೆ ಮಾಡಲಾಗಿದೆ ಎಂದು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಿಯೂಷ್ ಗೋಯಲ್ ಅವರು ಹೇಳಿದ್ದಾರೆ.

"ನಮ್ಮಲ್ಲಿ ಸಾಕಷ್ಟು ಆಮ್ಲಜನಕವಿದೆ. ಆದರೆ ಅದನ್ನು ಸಾಗಿಸುವ ಸಮಸ್ಯೆಯಾಗಿದ್ದು, ಎಲ್ಲಾ ಪಾಲುದಾರರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ನಾವು ಅದನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ" ಎಂದು ಗೋಯಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳಿಂದಾಗಿ ದೇಶದಲ್ಲಿ ಆಮ್ಲಜನಕದ ಬೇಡಿಕೆ ಹೆಚ್ಚುತ್ತಿರುವ ಮಧ್ಯೆ, "ಉತ್ಪಾದಕ ರಾಜ್ಯಗಳಿಂದ ಹೆಚ್ಚಿನ ಬೇಡಿಕೆಯಿರುವ ಪ್ರದೇಶಗಳಿಗೆ ಆಮ್ಲಜನಕದ ಸಾಗಣೆಯ ಸಮಸ್ಯೆಯನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತಿರುವುದರಿಂದ ಆಮ್ಲಜನಕಕ್ಕೆ ಭಯಪಡುವ ಅಗತ್ಯವಿಲ್ಲ" ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com