ಕೋವಿಡ್ -19: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಉತ್ತಮ ಸಿದ್ದತೆ- ಹರ್ಷವರ್ಧನ್ 

ಕೋವಿಡ್-19 ಸಾಂಕ್ರಾಮಿಕ ನಿಭಾಯಿಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಹೆಚ್ಚಿನ ಅನುಭವದೊಂದಿಗೆ ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ರೀತಿಯಲ್ಲಿ ಸಿದ್ಧಗೊಂಡಿದ್ದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಂಗಳವಾರ ಹೇಳಿದ್ದಾರೆ.
ಕೇಂದ್ರ ಸಚಿವ ಡಾ. ಹರ್ಷವರ್ಧನ್
ಕೇಂದ್ರ ಸಚಿವ ಡಾ. ಹರ್ಷವರ್ಧನ್

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ನಿಭಾಯಿಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಹೆಚ್ಚಿನ ಅನುಭವದೊಂದಿಗೆ ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ರೀತಿಯಲ್ಲಿ ಸಿದ್ಧಗೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಂಗಳವಾರ ಹೇಳಿದ್ದಾರೆ.

ಚಂಡೀಘಡ, ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದ 13 ಕಡೆಗಳಲ್ಲಿ ಆಯೋಜಿಸಿದ್ದ ರಕ್ತ ದಾನ ಶಿಬಿರವನ್ನು ವೆಬಿನರ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜನರು ವರ್ಷಕ್ಕೆ  ಒಂದು ಬಾರಿ ತಮ್ಮ ಜನ್ಮ ದಿನದಂದು  ರಕ್ತ ದಾನ ಮಾಡಬೇಕು, ಇದರಿಂದ ಮಾನವೀಯತೆಗೆ ದೊಡ್ಡ ನೆರವಾಗಲಿದೆ ಎಂದು ಪ್ರೋತ್ಸಾಹಿಸಿದರು.

ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ವಿಶ್ವದ ಅತ್ಯಂತ ದೊಡ್ಡ ಲಸಿಕಾ ಅಭಿಯಾನದಲ್ಲಿ ಮೇ 1 ರಿಂದ 18 ವರ್ಷಕ್ಕೂ ಮೇಲ್ಪಟ್ಟ ಯುವಕರಿಗೂ ಲಸಿಕೆ ನೀಡಲಾಗುತ್ತಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ರೀತಿಯಲ್ಲಿ ಸಾಂಕ್ರಾಮಿಕ ವಿರುದ್ಧ ಹೋರಾಟಕ್ಕೆ ಸಿದ್ಧಗೊಂಡಿದ್ದಾಗಿ ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com