ಭೂಗತ ಪಾತಕಿ ಛೋಟಾ ರಾಜನ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು

ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆ(ಏಮ್ಸ್) ದಾಖಲಿಸಲಾಗಿದೆ.
ಛೋಟಾ ರಾಜನ್
ಛೋಟಾ ರಾಜನ್

ಮುಂಬೈ: ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆ(ಏಮ್ಸ್) ದಾಖಲಿಸಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಸೋಮವಾರ ಮುಂಬೈನ ಸೆಷನ್ಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

61 ವರ್ಷದ ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸೋಮವಾರ, ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com