ಮಹಾರಾಷ್ಟ್ರ: ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತ

ಮಹಾರಾಷ್ಟ್ರದಲ್ಲಿ ಇಂದು ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನಾಗಪುರ: ಮಹಾರಾಷ್ಟ್ರದಲ್ಲಿ ಇಂದು ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪೊಲೀಸರೊಂದಿಗೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರಿಬ್ಬರು ಹತರಾಗಿದ್ದಾರೆ. 

ಈ ಕುರಿತು ಮಾಹಿತಿ ನೀಡಿದ ಗಡ್‌ಚಿರೋಲಿ ಎಸ್ ಪಿ ಅಂಕಿತ್ ಗೋಯಲ್ ಅವರು, 'ಜಾಂಬಿಯಾ ಗಟ್ಟಾ ಅರಣ್ಯದಲ್ಲಿ  ಸಿ-60 ಕಮಾಂಡೋಗಳು ಮತ್ತು ಗಡ್‌ಚಿರೋಲಿ ಪೊಲೀಸರು ಬುಧವಾರ ಬೆಳಿಗ್ಗೆ 6.30ರ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು  ನಕ್ಸಲರು ಮೃತಪಟ್ಟಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಹೇಳಿದ್ದಾರೆ.

ಅಂತೆಯೇ ಘಟನಾ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com