ಒಂದೇ ದಿನ 580 ಕ್ಕೂ ಹೆಚ್ಚು ಸಿಎಪಿಎಫ್, ಕೇಂದ್ರ ಪಡೆಗಳ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಒಂದೇ ದಿನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಬರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಮತ್ತು ಇತರ ಎರಡು ಕೇಂದ್ರ ಪಡೆಗಳ 580 ಕ್ಕೂ ಹೆಚ್ಚು ಸಿಬ್ಬಂದಿ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಒಂದೇ ದಿನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಬರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಮತ್ತು ಇತರ ಎರಡು ಕೇಂದ್ರ ಪಡೆಗಳ 580 ಕ್ಕೂ ಹೆಚ್ಚು ಸಿಬ್ಬಂದಿ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಕಾರ, ನೇಪಾಳ ಮತ್ತು ಭೂತಾನ್ ಗಡಿ ಕಾವಲು ಪಡೆ ಸಶಸ್ತ್ರ ಸೀಮಾ ಬಲ(ಎಸ್‌ಎಸ್‌ಬಿ) ದಲ್ಲಿ ಗರಿಷ್ಠ 149 ಸಿಬ್ಬಂದಿಗೆ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ 146 ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.

ಈ ಎರಡು ಪಡೆಗಳು ದೇಶದ ಪ್ರಮುಖ ನಾಗರಿಕ ವಿಮಾನ ನಿಲ್ದಾಣಗಳ ಭದ್ರತೆ ಮತ್ತು ಇತರ ನಿರ್ಣಾಯಕ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಇನ್ನೂ ಬಾರ್ಡರ್ ಸೆಕ್ಯುರಿಟಿ ಫೋರ್ಸ್(ಬಿಎಸ್ಎಫ್) ನ 132  ಸಿಬ್ಬಂದಿಗೆ ಮತ್ತು ಪ್ರಮುಖ ನಕ್ಸಲ್ ವಿರೋಧಿ ಕಾರ್ಯಾಚರಣೆ ಪಡೆ ಕೇಂದ್ರ ರಿಸರ್ವ್ ಪೊಲೀಸ್ ಪಡೆ(ಸಿಆರ್ಪಿಎಫ್)ಯ 119 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com