ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್'ಗೆ ಕೊರೋನಾ ಪಾಸಿಟಿವ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಗುರುವಾರ ತಿಳಿದುಬಂದಿದೆ. 
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಗುರುವಾರ ತಿಳಿದುಬಂದಿದೆ. 

ಈ ಕುರಿತು ಸ್ವತಃ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇಂದು ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ಯಾವುದೇ ರೀತಿಯ ಲಕ್ಷಣಗಳೂ ಕಂಡು ಬಂದಿಲ್ಲ. ನನ್ನ ಆರೋಗ್ಯ ಸ್ಥಿರವಾಗಿದೆ. ಕೊರೋನಾ ನಿಯಮ ಪಾಲನೆ ಮಾಡಬೇಕಾದ ಹಿನ್ನೆಲೆಯಲ್ಲಿ ನಾನು ಐಸೋಲೇಷನ್ ಒಳಗಾಗಲಿದ್ದು, ಐಸೋಲೇಷನ್ ನಲ್ಲಿಯೇ ನನ್ನ ಕಾರ್ಯವನ್ನು ಮುಂದುವರೆಸುತ್ತೇನೆಂದು ಹೇಳಿದ್ದಾರೆ. 

ನಿನ್ನೆಯಷ್ಟೇ ಗೆಹ್ಲೋಟ್ ಅವರ ಪತ್ನಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದ ಗೆಹ್ಲೋಟ್ ಅವರು, ಪತ್ನಿ ಸುನಿತಾ ಗೆಹ್ಲೋಟ್‌ಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕೋವಿಡ್ ಮಾರ್ಗಸೂಚಿ ಪ್ರಕಾರ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಮನೆಯಲ್ಲೇ ಪತ್ಯೇಕವಾಸ ಆರಂಭಿಸಿದ್ದೇನೆ. ಪ್ರತಿದಿನ ರಾತ್ರಿ 8.30ಕ್ಕೆ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಕೋವಿಡ್ ವಿಮರ್ಶೆ ಸಭೆ ನಡೆಸುತ್ತೇನೆಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com