ಕೋವಿಡ್-19 ಪಾಸಿಟಿವ್ ನಂತರ ಬಹು ಅಂಗಾಂಗ ಸಮಸ್ಯೆಯಿಂದ ಬಿಹಾರ ಮುಖ್ಯ ಕಾರ್ಯದರ್ಶಿ ಸಾವು

ಕೋವಿಡ್-19 ಪಾಸಿಟಿವ್ ನಂತರ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸಿಂಗ್ ಶುಕ್ರವಾರ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ವಾರದ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಕೋವಿಡ್-19 ಪಾಸಿಟಿವ್ ನಂತರ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದ ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸಿಂಗ್ ಶುಕ್ರವಾರ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ವಾರದ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

1985ರ ಬ್ಯಾಚಿನ ಬಿಹಾರ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದ ಸಿಂಗ್, ಈ ವರ್ಷದ ಫೆಬ್ರವರಿ 27 ರಂದು ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಬಿಹಾರದ ಚಂಪಾರಣ್ ಜಿಲ್ಲೆಯವರಾದ ಅರುಣ್ ಕುಮಾರ್ ಸಿಂಗ್ ಈ ವರ್ಷದ ಆಗಸ್ಟ್ 31 ರಂದು ನಿವೃತ್ತಿಯಾಗಬೇಕಿತ್ತು.

ಅಭಿವೃದ್ಧಿ ಆಯುಕ್ತ ಮತ್ತು ಗ್ರಾಮೀಣ ವಿಕಾಸ್ ಸಂಸ್ಥಾನ್ ನದ ಮಹಾನಿರ್ದೇಶಕ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಉನ್ನತ ಹುದ್ದೆಗಳನ್ನು ಅರುಣ್ ಕುಮಾರ್ ಸಿಂಗ್ ನಿರ್ವಹಿಸಿದ್ದರು ಎಂಬುದಾಗಿ ಮೂಲಗಳು ತಿಳಿಸಿವೆ.

ಅರುಣ್ ಕುಮಾರ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com