ಭಾರತದಲ್ಲಿ ಕೊರೋನಾ ಅಬ್ಬರ: ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಮಂತ್ರಿಮಂಡಲ ಸಭೆ
ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ಕ್ರಮಗಳ ಕೈಗೊಳ್ಳುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಂತ್ರಿಮಂಡಲ ಸಭೆ ನಡೆಸಲಿದ್ದಾರೆ.
Published: 30th April 2021 01:58 PM | Last Updated: 30th April 2021 02:03 PM | A+A A-

ಪ್ರಧಾನಿ ಮೋದಿ
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ಕ್ರಮಗಳ ಕೈಗೊಳ್ಳುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಂತ್ರಿಮಂಡಲ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಬಗ್ಗೆ ಮೋದಿಯವರು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಮತ್ತೆ ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಯಾಗಲಿದೆಯೇ ಎಂಬ ಆತಂಕ ಜನರನ್ನು ಕಾಡುತ್ತಿದೆ.
ಇದಲ್ಲದೆ ಮೇ 1 ರಿಂದ 18-45 ವರ್ಷದವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಈ ಕುರಿತ ಸಿದ್ಥತೆಗಳ ಕುರಿತಂತೆಯೂ ಮೋದಿಯವರು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೊರೋನಾ 2ನೇ ಅಲೆ ಕಾಣಿಸಿಕೊಂಡ ಬಳಿಕ ಮೋದಿಯವರು ಮಂತ್ರಿ ಪರಿಷತ್ ಜೊತೆ ಸಭೆ ನಡೆಸುತ್ತಿರುವುದು ಇದೇ ಮೊದಲಾಗಿದೆ.
ಸಂಪುಟ ಸಭೆಯಲ್ಲಿ ಕೇವಲ ಕ್ಯಾಬಿನೆಟ್ ಮತ್ತು ರಾಜ್ಯ ಖಾತೆ (ಸ್ವತಂತ್ರ) ಸಚಿವರು ಮಾತ್ರವೇ ಭಾಗಿಯಾಗುತ್ತಾರೆ. ಆದರೆ, ಮಂತ್ರಿ ಪರಿಷತ್ ಸಭೆಯಲ್ಲಿ ಎಲ್ಲಾ ರಾಜ್ಯ ಸಚಿವರು ಕೂಡ ಭಾಗಿಯಾಗುತ್ತಾರೆ.