ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ನಿಷೇಧ ಮೇ 31ರವರೆಗೆ ವಿಸ್ತರಣೆ

ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ನಿಷೇಧವನ್ನು ಮೇ 31 ರವರೆಗೆ ವಿಸ್ತರಿಸಿ ವಾಯುಯಾನ ನಿಯಂತ್ರಕ ಡಿಜಿಸಿಎ ಶುಕ್ರವಾರ ಪ್ರಕಟಣೆ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ನಿಷೇಧವನ್ನು ಮೇ 31 ರವರೆಗೆ ವಿಸ್ತರಿಸಿ ವಾಯುಯಾನ ನಿಯಂತ್ರಕ ಡಿಜಿಸಿಎ ಶುಕ್ರವಾರ ಪ್ರಕಟಣೆ ಹೊರಡಿಸಿದೆ. "ಆದಾಗ್ಯೂ, ಆಯ್ದ ಮಾರ್ಗಗಳಲ್ಲಿ ಸಮರ್ಥ ಪ್ರಾಧಿಕಾರವು ಕೇಸ್-ಟು-ಕೇಸ್ ಆಧಾರದ ಮೇಲೆ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ಅನುಮತಿಸಬಹುದು" ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಹೇಳಿದೆ.

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಕಾರಣ ಕಳೆದ ಮಾರ್ಚ್ 23 ರಿಂದ ಭಾರತದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಯಾನ ಸೇವೆ ಸ್ಥಗಿತಗೊಳಿಸಲಾಗಿದೆ. ಆದರೆ ವಿಶೇಷ ಅಂತರರಾಷ್ಟ್ರೀಯ ವಿಮಾನಗಳು ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ "ಏರ್ ಬಬಲ್" ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಯುಎಸ್, ಯುಕೆ, ಯುಎಇ, ಕೀನ್ಯ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಸುಮಾರು 24 ದೇಶಗಳೊಂದಿಗೆ ಭಾರತ ಏರ್ ಬಬಲ್ಸ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ಸ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ತಮ್ಮ ತಮ್ಮ ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.

ಈ ನಿಷೇಧವು ಅಂತರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ಅದರಿಂದ ನಿರ್ದಿಷ್ಟವಾಗಿ ಅನುಮೋದಿಸಲ್ಪಟ್ಟ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಡಿಜಿಸಿಎ ಸುತ್ತೋಲೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com