ಯಾರೊಬ್ಬರಿಗೂ ಸಹಾಯ ಮಾಡಲಾಗುತ್ತಿಲ್ಲ, ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ನ್ಯಾಯಾಲಯಕ್ಕೆ ಆಪ್ ಶಾಸಕ ಮನವಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಶುಕ್ರವಾರ ಆಗ್ರಹಿಸಿದ್ದಾರೆ.
ಆಪ್ ಶಾಸಕ ಶೋಯೆಬ್ ಇಕ್ಬಾಲ್
ಆಪ್ ಶಾಸಕ ಶೋಯೆಬ್ ಇಕ್ಬಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಶುಕ್ರವಾರ ಆಗ್ರಹಿಸಿದ್ದಾರೆ.

ಕಳೆದ ವರ್ಷ  ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿರುವಾಗ ಕಾಂಗ್ರೆಸ್ ಪಕ್ಷದಿಂದ ಇಕ್ಬಾಲ್ ಆಪ್‍ಗೆ ವಲಸೆ ಬಂದಿದ್ದರು. ಈಗ ವೀಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಅಗತ್ಯವೆಂದು ಅವರು ಹೇಳಿದ್ದಾರೆ. 

"ದೆಹಲಿಯ ಪರಿಸ್ಥಿತಿಯಿಂದ ನನಗೆ ಸಾಕಷ್ಟು ನೋವಾಗಿದೆ. ಪರಿಸ್ಥಿತಿಯಿಂದ ಬಹಳ ಚಿಂತೆಗೀಡಾಗಿದ್ದೇನೆ, ನಿದ್ದೆ ಮಾಡಲು ಆಗುತ್ತಿಲ್ಲ. ಜನರಿಗೆ ಆಕ್ಸಿಜನ್ ಮತ್ತು ಔಷಧಿಗಳು ದೊರಕುತ್ತಿಲ್ಲ, ನನ್ನ ಸ್ನೇಹಿತ ಕಷ್ಟದಲ್ಲಿದ್ದಾನೆ, ಆತ ಆಸ್ಪತ್ರೆಯಲ್ಲಿದ್ದಾನೆ. ಆದರೆ, ಆಕ್ಸಿಜನ್ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ವೈದ್ಯರು ನೀಡಿದ ರೆಮ್ಡಿಸಿವಿರ್ ಪ್ರಿಸ್ಕ್ರಿಪ್ಶನ್ ನನ್ನ ಬಳಿ ಇದೆ ಆದರೆ ಅದನ್ನು ಎಲ್ಲಿಂದ ತರಲಿ? ಅವರ ಮಕ್ಕಳು ಅದಕ್ಕಾಗಿ ಅಲೆದಾಡುತ್ತಿದ್ದಾರೆ. ಇಂದು ಒಬ್ಬ ಶಾಸಕನೆಂದು ಕರೆಸಿಕೊಳ್ಳುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ, ಏಕೆಂದರೆ ನನಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. 

ಸರಕಾರ ಕೂಡ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ನಾನು ಆರು ಬಾರಿ ಶಾಸಕನಾಗಿ ಆಯ್ಕೆಯಾದವನು. ಅತ್ಯಂತ ಹಿರಿಯ ಶಾಸಕ. ಆದರೂ ಯಾರೂ ಸ್ಪಂದಿಸುತ್ತಿಲ್ಲ, ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ನಾನು ದೆಹಲಿ ಹೈಕೋರ್ಟಿಗೆ ಮನವಿ ಮಾಡಲು ಬಯಸುತ್ತೇನೆ. ಇಲ್ಲದೇ ಇದ್ದಲ್ಲಿ ರಸ್ತೆಯಲ್ಲಿ ಹೆಣಗಳೇ ಇರಲಿವೆ" ಎಂದು  ಅವರು ಹೇಳಿದ್ದಾರೆ.

ಈ ನಡುವೆ ಇಕ್ಬಾಲ್ ಅವರ ವೀಡಿಯೋ ಸಂದೇಶಕ್ಕೆ ಆಮ್ ಆದ್ಮಿ ಪಕ್ಷ ಯಾವುದೇ ರೀತಿಯ ಅಧಿಕೃತ ಪ್ರತಿಕ್ರಿಯೆಗಳನ್ನೂ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com