ಭಾರತದಲ್ಲಿ ಕೊರೋನಾ ಏರಿಕೆ: ಸತತ 5ನೇ ದಿನವೂ 40 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4.10 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬೆಳವಣಿಗೆಯು ಇದೀಗ ಕೊರೋನಾ 3ನೇ ಅಲೆ ಕುರಿತ ಆತಂಕವನ್ನು ಹೆಚ್ಚು ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 5 ದಿನಗಳಿಂದ 40 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬೆಳವಣಿಗೆಯು ಇದೀಗ ಕೊರೋನಾ 3ನೇ ಅಲೆ ಕುರಿತ ಆತಂಕವನ್ನು ಹೆಚ್ಚು ಮಾಡಿದೆ. 

ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,831 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 541 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,16,55,824ಕ್ಕೆ ತಲುಪಿದ್ದು, ಸಾವಿನ 4,23,758ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,10,952ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 39,258 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,08,20,521ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 17,89,472 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 46,82,16,510 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ   47,02,98,596 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com