ಲಸಿಕೆ ಲಭ್ಯತೆ ಪ್ರಶ್ನಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಮಾಂಡವೀಯಾ

ದೇಶದಲ್ಲಿ ಲಸಿಕೆ ಅಭಿಯಾನ ಈ ತಿಂಗಳಲ್ಲಿ ಮತ್ತಷ್ಟು ಉತ್ತೇಜನ ಪಡೆಯಲಿದೆ ಎಂದು ಭಾನುವಾರ ಹೇಳಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಸರ್ಕಾರದ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮನ್ಸುಖ್ ಮಾಂಡವೀಯಾ
ಮನ್ಸುಖ್ ಮಾಂಡವೀಯಾ

ನವದೆಹಲಿ: ದೇಶದಲ್ಲಿ ಲಸಿಕೆ ಅಭಿಯಾನ ಈ ತಿಂಗಳಲ್ಲಿ ಮತ್ತಷ್ಟು ಉತ್ತೇಜನ ಪಡೆಯಲಿದೆ ಎಂದು ಭಾನುವಾರ ಹೇಳಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಸರ್ಕಾರದ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದ ಆರೋಗ್ಯ ಕಾರ್ಯಕರ್ತರ ಕೆಲಸದ ಬಗ್ಗೆ ಪ್ರತಿಯೊಬ್ಬರು ಹೆಮ್ಮೆ ಪಡುವಂತಹ ಭಾವನೆ ಇರಬೇಕು ಎಂದು ರಾಹುಲ್ ಗಾಂಧಿಗೆ ಅವರು ಹೇಳಿದ್ದಾರೆ. ಕಳೆದ ತಿಂಗಳು ಲಸಿಕೆ ಲಭ್ಯತೆಯನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಮಾಂಡವೀಯಾ, ಜುಲೈ ತಿಂಗಳಲ್ಲಿ 13 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ. ಈ ತಿಂಗಳು ಲಸಿಕಾ ಅಭಿಯಾನ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದರು. 

ರಾಹುಲ್ ಗಾಂಧಿ ಪೋಸ್ಟ್ ಗೆ ಹಿಂದಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಂಡವೀಯಾ, ಲಸಿಕಾ ಅಭಿಯಾನ ಈ ತಿಂಗಳಲ್ಲಿ ಮತ್ತಷ್ಟು ವೇಗ ಪಡೆಯಲಿದೆ. ಈ ಸಾಧನೆಗೆ ನಮ್ಮ ಆರೋಗ್ಯ ಕಾರ್ಯಕರ್ತರ ಬಗ್ಗೆ ನಾವೆಲ್ಲ ಹೆಮ್ಮೆ ಪಡಬೇಕಾಗಿದೆ. ಈಗ ನೀವೂ ಅವರ ಬಗ್ಗೆ ಮತ್ತು ದೇಶದ ಬಗ್ಗೆ ಹೆಮ್ಮೆ ಪಡಬೇಕು ಎಂದು ಹೇಳಿದ್ದಾರೆ. ನಿನ್ನೆ ದಿನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಜುಲೈ ತಿಂಗಳು ಮುಗಿದಿದೆ, ಆದರೆ, ಆದರೆ ಲಸಿಕೆಯ ಕೊರತೆ ನೀಗಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ದೇಶದಲ್ಲಿ ನೀಡಲಾದ ಸಂಚಿತ ಕೋವಿಡ್ -19 ಲಸಿಕೆ ಪ್ರಮಾಣ 47 ಕೋಟಿ ದಾಟಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 60,15,842 ಡೋಸ್‌ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ಬೆಳಿಗ್ಗೆ ತಿಳಿಸಿದೆ. ಮೂರು ಕೋಟಿಗೂ ಹೆಚ್ಚು ಬಳಕೆಯಾಗದ ಡೋಸ್ ಗಳು ಈಗಲೂ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇವೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com