ಅಮರ್ ಜಿತ್ ಸಿನ್ಹಾ
ಅಮರ್ ಜಿತ್ ಸಿನ್ಹಾ

ಪ್ರಧಾನಿ ನರೇಂದ್ರ ಮೋದಿ ಸಲಹೆಗಾರ ಅಮರ್‌ ಜಿತ್‌ ಸಿನ್ಹಾ ರಾಜಿನಾಮೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಹಿರಿಯ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಹಿರಿಯ ಅಧಿಕಾರಿ ರಾಜೀನಾಮೆ ನೀಡಿದ್ದಾರೆ. 

ಪಿಎಂಒ ದಲ್ಲಿ ಸಾಮಾಜಿಕ ಸಂಬಂಧ ವ್ಯವಹಾರಗಳ ನೋಡಿಕೊಳ್ಳುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮರ್‌ ಜಿತ್‌ ಸಿನ್ಹಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. 

ಬಿಹಾರ ಕೇಡರ್‌ ನ ಅಮರ್‌ ಜಿತ್‌ ಸಿನ್ಹಾ 1983ರ ತಂಡದ ಐಎಎಸ್ ಅಧಿಕಾರಿ. 2019ರಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯಾಗಿ ನಿವೃತ್ತಿಗೊಂಡ ನಂತರ 2020ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ಪ್ರಧಾನಿ ಕಾರ್ಯಾಲಯದ ಸಲಹೆಗಾರರಾಗಿ ನೇಮಕಗೊಂಡಿದ್ದರು.

ಆದರೆ, ಇನ್ನೂ ಏಳು ತಿಂಗಳು ಅಧಿಕಾರವಧಿ ಇರುವಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ಮಾಡುವುದು ಗಮನಾರ್ಹ. ಈ ಮೊದಲು ಪ್ರಧಾನಿ ಕಾರ್ಯಾಲಯದ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಂಪುಟ ಕಾರ್ಯದರ್ಶಿ ಪಿ.ಕೆ.ಸಿನ್ಹಾ ರಾಜೀನಾಮೆ ನೀಡಿದ ಕೆಲವು ತಿಂಗಳಲ್ಲಿ ಅಮರ್‌ ಜಿತ್‌ ಸಿನ್ಹಾ ಹುದ್ದೆಗೆ ರಾಜೀನಾಮೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮರ್‌ ಜಿತ್‌ ಸಿನ್ಹಾ ತಮ್ಮ ರಾಜಿನಾಮೆಗೆ ಯಾವುದೇ ಕಾರಣ ನೀಡಿಲ್ಲ ಎಂದು ವರದಿಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com