ಛತ್ತೀಸ್ಗಢ: ಸರ್ಕಾರಿ ಕಚೇರಿ ಬಳಿ ಆತ್ಮಹತ್ಯೆಗೆ ಶರಣಾದ ರೈತ

ಛತ್ತೀಸ್ ಘಡದ ರಾಯಘಡ ಜಿಲ್ಲೆಯ ಸರ್ಕಾರಿ ಕಚೇರಿ ಬಳಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಯಘಡ: ಛತ್ತೀಸ್ ಘಡದ ರಾಯಘಡ ಜಿಲ್ಲೆಯ ಸರ್ಕಾರಿ ಕಚೇರಿ ಬಳಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. 

ಕಾಟಂಗಿಪಲಿ ಗ್ರಾಮದ ನಿವಾಸಿಯಾಗಿರುವ ಬೈರಗಿ ಮಿರಿ (38) ಆತ್ಮಹತ್ಯೆಗೆ ಶರಣಾದ ರೈತರೆಂದು ತಿಳಿದುಬಂದಿದೆ. 

ನಿನ್ನೆಯ ಬರಂಕೆಲಾ ಟೌನ್ ನಲ್ಲಿರುವ ತಹಶೀಲ್ದಾರ್ ಕಚೇರಿ ಬಳಿ ಬಂದಿರುವ ರೈತ ಬೈರಗಿ ಮಿರಿ ಅವರು, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಸಾರಂಗರ್ಹ್ ಪ್ರದೇಶದ ಪೊಲೀಸ್ ಉಪವಿಭಾಗಾಧಿಕಾರಿ ಪ್ರಭಾತ್ ಪಟೇಲ್ ಅವರು ಹೇಳಿದ್ದಾರೆ.

ವಿಷ ಸೇವಿಸಿದ್ದ ರೈತನನ್ನುಕೂಡಲೇ ರಾಯಘಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದರು ಎಂದು ತಿಳಿಸಿದ್ದಾರೆ. 

ಆತ್ಮಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ರೈತನ ಕುಟುಂಬ ಸದಸ್ಯರೊಬ್ಬರು ಮಾತನಾಡಿದ್ದು, ಭೂಮಿ ಮಾರಲು ಪ್ರಯತ್ನಿಸುತ್ತಿದ್ದರು. ಆದರೆ, ಕೆಲ ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದರಿಂದ ತೀವ್ರವಾಗಿ ನೊಂದಿದ್ದರು ಎಂದು ಹೇಳಿದ್ದಾರೆಂದು ಕೆಲ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com