10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ ಮಾಡಿದ ಜಮ್ಮು-ಕಾಶ್ಮೀರ ಪೊಲೀಸರು

ಕಣಿವೆ ರಾಜ್ಯದಲ್ಲಿ ಆತಂಕ ಸೃಷ್ಟಿಸಲು ಸಂಚು ರೂಪಿಸಿರುವ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರ ಬಿಡುಗಡೆ ಮಾಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಆತಂಕ ಸೃಷ್ಟಿಸಲು ಸಂಚು ರೂಪಿಸಿರುವ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರ ಬಿಡುಗಡೆ ಮಾಡಿದ್ದಾರೆ. 

ಕಾಶ್ಮೀರ ಪೊಲೀಸ್ ಐಜಿ ವಿಜಯ್ ಕುಮಾರ್ ಅವರು, 10 ಭಯೋತ್ಪಾದಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಪಟ್ಟಿಯಲ್ಲಿ ಕೆಲವು ಹಳೆಯ ಮತ್ತು ಕೆಲ ಹೊಸ ಉಗ್ರರ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ. ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆಯನ್ನು ಹರಡಲು ಪ್ರಯತ್ನಿಸುತ್ತಿರುವ ಈ ಭಯೋತ್ಪಾದಕರು ವಿವಿಧ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ.

ಪಟ್ಟಿಯಲ್ಲಿ ಹಳೆಯ ಸಲೀಂ ಪರ್ರೆ, ಯೂಸುಫ್ ಕಾಂಟ್ರೋ, ಅಬ್ಬಾಸ್ ಶೇಖ್, ರಿಯಾಜ್ ಶೆಟರ್ಗುಂಡ್, ಫಾರೂಕ್ ನಲಿ, ಜುಬೇರ್ ವಾನಿ ಮತ್ತು ಅಶ್ರಫ್ ಮೊಲ್ವಿ ಹಳೆಯ ಭಯೋತ್ಪಾದಕರಿದ್ದು, ಸಾಕಿಬ್ ಮಂಜೂರ್, ಉಮರ್ ಮುಸ್ತಾಕ್ ಖಾಂಡೆ ಮತ್ತು ವಕೀಲ ಶಾ ಹೆಸರುಗಳು ಹೊಸ ಭಯೋತ್ಪಾದಕರೆಂದು ಹೇಳಲಾಗಿದೆ. 

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಭದ್ರತಾ ಪಡೆಗಳು ಆಪರೇಷನ್ ಕ್ಲೀನ್ ಅನ್ನು ನಿರಂತರವಾಗಿ ನಡೆಸುತ್ತಿವೆ. ಇದರಂತೆ ಪೊಲೀಸರು ಆಗಾಗ್ಗೆ ವಾಂಟೆಡ್ ಉಗ್ರರ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com