ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಿದ ಶರದ್ ಪವಾರ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ಅಮಿತ್ ಶಾ, ಶರದ್ ಪವಾರ್
ಅಮಿತ್ ಶಾ, ಶರದ್ ಪವಾರ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ. ಸಕ್ಕರೆ ಬೆಲೆ ಮತ್ತು ಪೆಟ್ರೋಲ್ ನಲ್ಲಿ ಎಥೆನಾಲ್ ಮಿಶ್ರಣ ಸಂಬಂಧ ಸಮಾಲೋಚನೆ ನಡೆಸಿದ್ದಾರೆ.

ರಾಷ್ಟ್ರೀಯ ರಾದ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಫೆಡರೇಶನ್ ಮುಖ್ಯಸ್ಥ ಹಾಗೂ ರಾಯಘಡದ ಎನ್ ಸಿಪಿ ಸಂಸದ ಜಯಪ್ರಕಾಶ್ ದಾಂಡೆಗಾಂಕರ್ ಅಮಿತ್ ಶಾ ಜೊತೆಗೆ ಉಪಸ್ಥಿತರಿದ್ದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ  ಪವಾರ್, ಪ್ರಸ್ತುತದಲ್ಲಿನ ಸಕ್ಕರೆ ಮಾರಾಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಇದು ಉತ್ಪಾದನೆಯ ಬೆಲೆಕ್ಕಿಂತ ಕಡಿಮೆಯಿದೆ. ಇದರ ಬಗ್ಗೆ ಸರ್ಕಾರ ಪರಿಶೀಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಪೆಟ್ರೋಲಿಯಂ ಉತ್ಪನ್ನಗಳೊಂದಿಗೆ ಎಥೆನಾಲ್ ಮಿಶ್ರಣವನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದರ ಬಗ್ಗೆಯೂ ಮಾತನಾಡಿ ರುವುದಾಗಿ ಮಾಜಿ ಕೃಷಿ ಸಚಿವರೂ ಆಗಿರುವ ಪವಾರ್ ತಿಳಿಸಿದರು. ಸಕ್ಕರೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಶೀಲಿಸುವುದಾಗಿ ಅಮಿತ್ ಶಾ ಭರವಸೆ ನೀಡಿರುವುದಾಗಿ ಎನ್ ಸಿಪಿ ಮುಖ್ಯಸ್ಥ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com