ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಟ್ವಿಟರ್ ಗೆ ಸೂಚನೆ
ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ದಲಿತ ಬಾಲಕಿಯ ಕುಟುಂಬದ ಫೋಟೋವೊಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬುಧವಾರ ಟ್ವಿಟರ್ ಗೆ ಸೂಚಿಸಿದೆ
Published: 04th August 2021 08:41 PM | Last Updated: 04th August 2021 08:46 PM | A+A A-

ರಾಹುಲ್ ಗಾಂಧಿ
ನವದೆಹಲಿ: ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ದಲಿತ ಬಾಲಕಿಯ ಕುಟುಂಬದ ಫೋಟೋವೊಂದನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬುಧವಾರ ಟ್ವಿಟರ್ ಗೆ ಸೂಚಿಸಿದೆ. ಇದು ಪೋಕ್ಸೊ ಕಾಯ್ದೆ ಮತ್ತು ಬಾಲ ನ್ಯಾಯ ಉಲ್ಲಂಘನೆ ಎಂದು ಹೇಳಿದೆ.
ರಾಹುಲ್ ಗಾಂಧಿ ಬುಧವಾರ ಒಂಬತ್ತು ವರ್ಷದ ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದರು. ನ್ಯಾಯ ದೊರಕಿಸುವಲ್ಲಿ ನಿಮ್ಮೊಂದಿಗೆ ಇರುತ್ತೇನೆ. ಒಂದು ಇಂಚು ಹೆಜ್ಜೆ ಕೂಡಾ ಹಿಂದೆ ಸರಿಯಲ್ಲ ಎಂದು ಹೇಳಿದ್ದರು. ತದನಂತರ ಬಾಲಕಿಯ ಪೋಷಕರ ಭೇಟಿಯ ಫೋಟೋವೊಂದನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದರು. ಹೆತ್ತವರ ಕಣ್ಣೀರು ಒಂದೇ ಒಂದು ವಿಷಯವನ್ನು ಹೇಳುತ್ತಿದೆ, ಅವರ ಮಗಳು, ಈ ದೇಶದ ಮಗಳು, ನ್ಯಾಯಕ್ಕೆ ಅರ್ಹಳು ಮತ್ತು ನ್ಯಾಯದ ಹಾದಿಯಲ್ಲಿ ನಾನು ಅವರೊಂದಿಗೆ ಇದ್ದೇನೆ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದರು.
माता-पिता के आँसू सिर्फ़ एक बात कह रहे हैं-
उनकी बेटी, देश की बेटी न्याय की हक़दार है।
और इस न्याय के रास्ते पर मैं उनके साथ हूँ। pic.twitter.com/ewgzGkWrHd— Rahul Gandhi (@RahulGandhi) August 4, 2021
ಈ ಸಂಬಂಧ ಟ್ವೀಟರ್ ಸ್ಥಾನಿಕ ಆಡಳಿತಾಧಿಕಾರಿಗೆ ಪತ್ರವೊಂದನ್ನು ಕಳುಹಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಸಂತ್ರಸ್ತೆಯ ಕುಟುಂಬಸ್ಥರ ಫೋಟೋವೊಂದನ್ನು ಹಂಚಿಕೊಂಡಿದ್ದು, ಅವರು ಬಾಲಕಿಯ ತಂದೆ ತಾಯಿ ಎಂದು ಹೇಳಿಕೊಂಡಿರುವ ಬಗ್ಗೆ ದೂರು ಸ್ವೀಕರಿಸಿರುವುದಾಗಿ ಹೇಳಿದೆ.
ಈ ಫೋಟೋದಲ್ಲಿ ಸಂತ್ರಸ್ತೆಯ ತಂದೆ ಮತ್ತು ತಾಯಿಯ ಮುಖಗಳನ್ನು ನೋಡಬಹುದು, ಇದು ಹುಡುಗಿಯ ಗುರುತನ್ನು ಬಹಿರಂಗಪಡಿಸುತ್ತದೆ ಆದ್ದರಿಂದ ಟ್ವಿಟರ್ ನಲ್ಲಿ ಅಪ್ತಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋ ಹಂಚಿಕೆ, ಪೋಕ್ಸೊ ಕಾಯ್ದೆಯ ಸೆಕ್ಷನ್ 23, ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 74, ಐಪಿಸಿ ಸೆಕ್ಷನ್ 228 ಎ ಉಲ್ಲಂಘನೆಯಾಗಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ಹೇಳಿದೆ.
ಟ್ವಿಟರ್ ಖಾತೆ ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಕ್ಕಾಗಿ ದೂರನ್ನು ವರ್ಗಾಯಿಸಲಾಗಿದ್ದು, ಟ್ವಿಟರ್ ಫ್ಲಾಟ್ ಫಾರಂನಿಂದ ಟ್ವೀಟ್ ಗಳನ್ನು ತೆಗೆಯಬೇಕು ಎಂದು ಸೂಚಿಸಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮೂರು ದಿನಗಳೊಳಗೆ ಕ್ರಮ ಈ ವಿಚಾರಕ್ಕೆ ತೆಗೆದುಕೊಂಡ ವರದಿ ಕಳುಹಿಸಬೇಕು ಎಂದು ಆಯೋಗ ಹೇಳಿದೆ.