ರಾಜಸ್ಥಾನದಲ್ಲಿ ಭಾರೀ ಮಳೆ: ಮನೆ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರ ದುರ್ಮರಣ
ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ಮೃತಪಟ್ಟಿದ್ದು, ಇನ್ನಿಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 04th August 2021 02:53 PM | Last Updated: 04th August 2021 02:53 PM | A+A A-

ಸಾಂದರ್ಭಿಕ ಚಿತ್ರ
ಕೋಟಾ: ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ಮೃತಪಟ್ಟಿದ್ದು, ಇನ್ನಿಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿ ನವಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಸಹೋದರರಾದ ಮಹೇಂದ್ರ ಕೈವತ್ ಮತ್ತು ಮಹಾವೀರ್ ಕೈವತ್ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ಹಳೆಯ ಗೋಡೆ ಕುಸಿದಿದೆ ಎಂದು ಬಂಡಿ ಎಸ್ಪಿ ಶಿವರಾಜ್ ಮೀನಾ ತಿಳಿಸಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ, ಕುಟುಂಬದ ಏಳು ಸದಸ್ಯರು ಅವಶೇಷಗಳಡಿ ಸಿಲುಕಿದ್ದು ಇಬ್ಬರನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಇತರ ಮೂವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕುಟುಂಬದ ಉಳಿದ ಇಬ್ಬರು ಸದಸ್ಯರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ದಶಕಗಳ ಹಿಂದೆ ಸೂಕ್ತ ಪ್ಲಾನ್ ಮಾಡದೇ ಮನೆ ನಿರ್ಮಿಸಲಾಗಿತ್ತು. ಈ ಕಾರಣದಿಂದಾಗಿಯೇ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.