ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಬಗ್ಗೆ ಆಕ್ಷೇಪಾರ್ಹ ಸಂದೇಶ: ಯುವಕನೋರ್ವನನ್ನು ಬಂಧಿಸಿದ ಪೊಲೀಸರು
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ವಾಟ್ಸ್‌ಆಪ್ ಮೇಸೆಜ್ ಮೂಲಕ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published: 04th August 2021 01:40 PM | Last Updated: 04th August 2021 01:40 PM | A+A A-

ಮೋಹನ್ ಭಾಗವತ್
ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ವಾಟ್ಸ್‌ಆಪ್ ಮೇಸೆಜ್ ಮೂಲಕ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೆಸ್ಸೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ನ ಜಿಲ್ಲಾ ಸಮನ್ವಯಾಧಿಕಾರಿ ನೀಡಿದ ದೂರಿನ ಮೇರೆಗೆ ಯುವಕನನ್ನು ಬಂಧಿಸಲಾಗಿದ್ದು ಆತನ ವಿರುದ್ಧ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಣೇಶ್ ಕಾಲೋನಿಯ ವಿಶಾಲ್ ಮೌರ್ಯ, ಮೋಹನ್ ಭಾಗವತ್ ಬಗ್ಗೆ ಕೆಲವು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದನು. ವಿಶಾಲ್ ಮೌರ್ಯ ಕಮೆಂಟ್ ಭಾಗವತರ ಭಾವನೆಗೆ ಧಕ್ಕೆ ತರುತ್ತದೆ ಎಂದು ಎಬಿವಿಪಿ ಜಿಲ್ಲಾ ಸಂಯೋಜಕ ಆಕಾಶ್ ಕುಮಾರ್ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಚಕ್ರೇಶ್ ಮಿಶ್ರಾ ಹೇಳಿದರು.
ವ್ಯಕ್ತಿಯ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು ಈ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.