ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್'ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ.
Published: 04th August 2021 12:06 PM | Last Updated: 04th August 2021 12:06 PM | A+A A-

ಪ್ರಧಾನಿ ಮೋದಿ
ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಆಟದಲ್ಲಿ ಉತ್ತಮ ಹೋರಾಟ ಮಾಡಿದಿರಿ ಲವ್ಲಿನಾ ಬೊರ್ಗೊಹೈನ್, ಬಾಕ್ಸಿಂಗ್ ನಲ್ಲಿ ಲವ್ಲಿನಾರ ಯಶಸ್ಸು ಹಲವಾರು ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ. ಆಕೆಯ ದೃಢತೆ ಮತ್ತು ತೆಗೆದುಕೊಳ್ಳುವ ನಿರ್ಣಯಗಳು ಶ್ಲಾಘನೀಯವಾಗಿದೆ. ಟೊಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಗೆದ್ದ ಲವ್ಲಿನಾ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇನೆಂದು ಹೇಳಿದ್ದಾರೆ.
Well fought @LovlinaBorgohai! Her success in the boxing ring inspires several Indians. Her tenacity and determination are admirable. Congratulations to her on winning the Bronze. Best wishes for her future endeavours. #Tokyo2020
— Narendra Modi (@narendramodi) August 4, 2021
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ಲಭಿಸಿದೆ. ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಬುಧವಾರ ನಡೆದ ಸೆಮಿಫೈನಲ್-1 ಪಂದ್ಯದಲ್ಲಿ ಟರ್ಕಿಯ ಬಾಕ್ಸರ್ ಬುಸೆನಾಜ್ ಸರ್ಮೆನೆಲಿ ಎದುರು ಲವ್ಲಿನಾ 0-5ರ ಸೋಲಿನೊಂದಿಗೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ತನ್ನ ಸ್ಪರ್ಧೆ ಮುಗಿಸಿದ್ದಾರೆ. ಆದರೆ ಭಾರತಕ್ಕೆ ಮೂರನೇ ಪದಕದ ಸಂಭ್ರಮ ಸಿಕ್ಕಿದೆ.