ದುರ್ಗಾ ಪೂಜೆ ರಜೆಯ ನಂತರ ಬಂಗಾಳದಲ್ಲಿ ಶಾಲೆ, ಕಾಲೇಜು ಆರಂಭಕ್ಕೆ ಚಿಂತನೆ: ಮಮತಾ ಬ್ಯಾನರ್ಜಿ
ನವೆಂಬರ್‌ನಲ್ಲಿ ದುರ್ಗಾ ಪೂಜೆಯ ರಜೆಯ ನಂತರ ಪರ್ಯಾಯ ದಿನಗಳಲ್ಲಿ ಶಾಲಾ, ಕಾಲೇಜುಗಳನ್ನು ಮತ್ತೆ ಆರಂಭಿಸಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published: 05th August 2021 06:35 PM | Last Updated: 05th August 2021 06:35 PM | A+A A-

ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ನವೆಂಬರ್‌ನಲ್ಲಿ ದುರ್ಗಾ ಪೂಜೆಯ ರಜೆಯ ನಂತರ ಪರ್ಯಾಯ ದಿನಗಳಲ್ಲಿ ಶಾಲಾ, ಕಾಲೇಜುಗಳನ್ನು ಮತ್ತೆ ಆರಂಭಿಸಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ನಂತರ ರಾಜ್ಯದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ.
"ಆದಾಗ್ಯೂ, ಶಾಲಾ, ಕಾಲೇಜ್ ಗಳನ್ನು ಪುನರರಾಂಭಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಮಮತಾ ಬ್ಯಾನರ್ಜಿ ಅವರು ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ವಿನಾಯಕ್ ಬ್ಯಾನರ್ಜಿ ನೇತೃತ್ವದ ಜಾಗತಿಕ ಸಲಹಾ ಮಂಡಳಿಯ(ಜಿಎಬಿ) ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೋವಿಡ್ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿದ್ದಾರೆ.