ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲುಗಲ್ಲು: ದೇಶದಲ್ಲಿ ಸುಮಾರು 50 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ

ಶುಕ್ರವಾರ 43.29 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಿಕೆಯೊಂದಿಗೆ ದೇಶದಲ್ಲಿ ನೀಡಲಾಗಿರುವ ಒಟ್ಟು ಕೋವಿಡ್ ಲಸಿಕೆ 50 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಶುಕ್ರವಾರ 43.29 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಿಕೆಯೊಂದಿಗೆ ದೇಶದಲ್ಲಿ ನೀಡಲಾಗಿರುವ ಒಟ್ಟು ಕೋವಿಡ್ ಲಸಿಕೆ 50 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಲಸಿಕೆ ನೀಡಲಾಗಿದೆ. ಶುಕ್ರವಾರದವರೆಗೂ 50 ಕೋಟಿ ಡೋಸ್ ಲಸಿಕೆ ನೀಡಿರುವುದು ಐತಿಹಾಸಿಕ ದಾಖಲೆಯಾಗಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್  ನಲ್ಲಿ ಹೇಳಿದ್ದಾರೆ.

ಲಸಿಕೆ ನೀಡಿಕೆ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ನೀಡಿರುವ ಸಚಿವರು, ದೇಶದಲ್ಲಿ 10 ಕೋಟಿ ಜನರಿಗೆ ಲಸಿಕೆ ಹಾಕಲು  85 ದಿನ ಬೇಕಾಯಿತು. ನಂತರದ 45 ದಿನಗಳಲ್ಲಿ 20 ಕೋಟಿ ಗಡಿ ದಾಟಲಾಯಿತು, ತದನಂತರ 29 ದಿನಗಳಲ್ಲಿ 30 ಕೋಟಿ ದಾಟಲಾಯಿತು. ಮತ್ತೆ 24 ದಿನಗಳಲ್ಲಿ 40 ಕೋಟಿ , ಇನ್ನೂ 20 ದಿನಗಳಲ್ಲಿ 50 ಕೋಟಿ ಡೋಸ್ ದಾಟಲಾಗಿದೆ ಎಂದು ಅವರು ಹೇಳಿದ್ದಾರೆ.

ಗಮನಾರ್ಹ ಸಾಧನೆಯೊಂದರಲ್ಲಿ ಲಸಿಕಾ ಅಭಿಯಾನದಡಿ ದೇಶದಲ್ಲಿ ಒಟ್ಟು 50 ಕೋಟಿ ಗೂ ಹೆಚ್ಚು ಲಸಿಕೆ ನೀಡಲಾಗಿದೆ (50,03,48,866) ಎಂದು ಆರೋಗ್ಯ ಸಚಿವಾಲಯ ಹೇಳಿದೆ. ತಾತ್ಕಾಲಿಕ ವರದಿ ಪ್ರಕಾರ ಶುಕ್ರವಾರ ಒಂದೇ ದಿನ 43.29 ಲಕ್ಷಕ್ಕೂ ಹೆಚ್ಚು ಲಸಿಕೆ ನೀಡಲಾಗಿದೆ.

ಶುಕ್ರವಾರ 18ರಿಂದ 44 ವರ್ಷದೊಳಗಿನ 22,93,781 ಫಲಾನುಭವಿಗಳು ಮೊದಲ ಡೋಸ್ ಪಡೆದಿದ್ದರೆ, 4,32,281 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೂರನೇ ಹಂತದ ಲಸಿಕಾ ಅಭಿಯಾನ ಆರಂಭವಾದಾಗಿನಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ   ಈ ಗುಂಪಿನ ಒಟ್ಟು 17,23,20,394 ಜನರು ಮೊದಲ ಡೋಸ್ ಪಡೆದಿದ್ದರೆ,  1,12,56,317 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಮಧ್ಯ ಪ್ರದೇಶ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯಸ್ಸಿನ ಒಂದು ಕೋಟಿಗೂ ಹೆಚ್ಚು ಜನರು ಕೋವಿಡ್-19 ಲಸಿಕೆ ಪಡೆದಿದ್ದಾರೆ. ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ 18-44 ವಯಸ್ಸಿನ 10 ಲಕ್ಷಕ್ಕೂ ಹೆಚ್ಚು ಜನರು ಮೊದಲ ಡೋಸ್ ಪಡೆದುಕೊಂಡಿದ್ದಾರೆ.

ಲಸಿಕಾ ಅಭಿಯಾನದ 203 ದಿನವಾದ ಆಗಸ್ಟ್ 6 ಶುಕ್ರವಾರದವರೆಗೂ  32,10,613 ಫಲಾನುಭವಿಗಳು ಮೊದಲ ಡೋಸ್ ಹಾಗೂ 11,19,060 ಫಲಾನುಭವಿಗಳು ಎರಡನೇ ಡೋಸ್ ಲಸಿಕೆ ಪಡೆಯುವುದರೊಂದಿಗೆ ಒಟ್ಟಾರೇ, 43,29,673 ಡೋಸ್  ಲಸಿಕೆ ನೀಡಲಾಗಿದೆ.  
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com