ರಜೌರಿ ಎನ್ ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಎನ್ ಕೌಂಟರ್
ಎನ್ ಕೌಂಟರ್
Updated on

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಕಾಶ್ಮೀರದ ರಜೌರಿ ಜಿಲ್ಲೆಯ ತನ್ಮಾಂಡಿ ಪ್ರದೇಶದಲ್ಲಿ ಉಗ್ರರ ಇರುವಿಕೆ ಪತ್ತೆ ಮಾಡಿದ್ದ ಸೇನಾಪಡೆಗಳು ಆ ಪ್ರದೇಶವನ್ನು ಸುತ್ತುವರೆದಿದೆ. ಆದರೆ ಸೈನಿಕರ ಆಗಮನದ ಬೆನ್ನಲ್ಲೇ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದರು. ಈ ವೇಳೆ ಸೈನಿಕರು ಕೂಡ ಪ್ರತಿದಾಳಿ ನಡೆಸಿದರು.

ನಿನ್ನೆ ರಾತ್ರಿಯಿಂದಲೇ ಗುಂಡಿನ ಚಕಮಕಿ ನಡೆಯುತ್ತಿದ್ದು, 16 ಕಾರ್ಪ್ ಕಾಮಾಂಡೋಗಳು ನಡೆಸಿದ ಈ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com