ಮುಂಬೈ ಸರ್ಕಾರಿ ಅಸ್ಪತ್ರೆಯಲ್ಲಿ ಸಿಲಿಂಡರ್ ಸೋರಿಕೆ, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ 58 ರೋಗಿಗಳು ಪ್ರಾಣಾಪಾಯದಿಂದ ಪಾರು!

ಮುಂಬೈ ಸರ್ಕಾರಿ ಅಸ್ಪತ್ರೆಯಲ್ಲಿ ಸಿಲಿಂಡರ್ ಸೋರಿಕೆಯುಂಟಾಗಿ ರೋಗಿಗಳು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಘಾತಕಾರಿ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಮುಂಬೈ ಸರ್ಕಾರಿ ಅಸ್ಪತ್ರೆಯಲ್ಲಿ ಸಿಲಿಂಡರ್ ಸೋರಿಕೆಯುಂಟಾಗಿ ರೋಗಿಗಳು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಘಾತಕಾರಿ ಘಟನೆ ನಡೆದಿದೆ.

ಮುಂಬೈನ ಚಿಂಚ್‌ಪೋಕಲಿ ಪ್ರದೇಶದಲ್ಲಿರುವ, ಬೃಹನ್‌ ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ಆಡಳಿತದಲ್ಲಿರುವ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶನಿವಾರ ಎಲ್‌ಪಿಜಿ ಸೋರಿಕೆಯಾಗಿ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಈ ವೇಳೆ 20 ಮಂದಿ ಕೋವಿಡ್ ಸೋಂಕಿತರೂ ಸೇರಿದಂತೆ 58 ರೋಗಿಗಳು ಆಸ್ಪತ್ರೆಯಲ್ಲಿದ್ದರು.  ಕೂಡಲೇ ಎಚ್ಚೆತ್ತ ಆಸ್ಪತ್ರೆಯ ಸಿಬ್ಬಂದಿಗಳು ಇವರನ್ನು ಸ್ಥಳಾಂತರಿಸಿದರು. 

ಬೆಳಿಗ್ಗೆ 11.34ರ ವೇಳೆಗೆ ಎಲ್‌ಪಿಜಿ ಸೋರಿಕೆಯಾಗಿದ್ದು. ಇದು ರೋಗಿಗಳಲ್ಲಿ, ಅವರ ಕುಟುಂಬದವರಲ್ಲಿ ಮತ್ತು ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಯಿತು ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷತಾ ಕ್ರಮವಾಗಿ ಎಲ್ಲರನ್ನೂ ಸ್ಥಳಾಂತರಿಸಲಾಗಿದ್ದು, ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com