ಕೋವಿಡ್ ಸಮಯದಲ್ಲೂ ಪ್ರಧಾನಿ ಮೋದಿ ಅಭಿವೃದ್ಧಿಯ ವೇಗ ಮುಂದುವರಿಸಿದ್ದಾರೆ: ಅಮಿತ್ ಶಾ

ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರಿದ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿಯೂ ಭಾರತವು ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸಲು ಬಿಡಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಅಹಮದಾಬಾದ್: ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರಿದ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿಯೂ ಭಾರತವು ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸಲು ಬಿಡಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯವರು ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಡೆದ  'ವಿಕಾಸ್ ದಿವಸ್' ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶ ಗೆದ್ದಿದೆ ಎಂದರು.

"ಅಭಿವೃದ್ಧಿಯ ಚಕ್ರವು ಪ್ರಪಂಚದಾದ್ಯಂತ ನಿಂತಾಗ, ಭಾರತದಲ್ಲಿ ಮಾತ್ರ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಯ ವೇಗ ಮುಂದುವರಿಯಿತು. "ನಾವು ಕೊರೋನಾ ವೈರಸ್ ವಿರುದ್ಧ ಬಲವಾಗಿ ಹೋರಾಡಿದೆವು ಮತ್ತು ಈ ಹೋರಾಟದಲ್ಲಿ ಗೆದ್ದಿದ್ದೇವೆ ಮತ್ತು ಅದೇ ಸಮಯದಲ್ಲಿ ಅಭಿವೃದ್ಧಿಯನ್ನು ಮುಂದುವರಿಸಿದ್ದೇವೆ" ಎಂದು ಹೇಳಿದರು.

ಇದೇ ವೇಳೆ, ಕೇಂದ್ರ ಗೃಹ ಸಚಿವರು 5,300 ಕೋಟಿ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು.

ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಸುಮಾರು ರೂ. 900 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ರೂ.630 ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಾಯಿತು ಮತ್ತು ರೂ. 241 ಕೋಟಿ ಮೌಲ್ಯದ ಇತರ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಶಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com