ಅದ್ಭುತ ಹೋರಾಟ; ಕಂಚು ಗೆದ್ದ ಬಜರಂಗ್ ಪುನಿಯಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಭಾರತದ ಪರ ಕಂಚಿನ ಪದಕ ಗೆದ್ದ ಬಜರಂಗ್ ಪುನಿಯಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.
ಬಜರಂಗ್ ಪುನಿಯಾ-ಪ್ರಧಾನಿ ಮೋದಿ
ಬಜರಂಗ್ ಪುನಿಯಾ-ಪ್ರಧಾನಿ ಮೋದಿ

ನವದೆಹಲಿ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಭಾರತದ ಪರ ಕಂಚಿನ ಪದಕ ಗೆದ್ದ ಬಜರಂಗ್ ಪುನಿಯಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.

ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದು. ಇಂದು  ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಗೆಲುವು ದಾಖಲಿಸಿ ಕಂಚಿನ ಪದಕ ಸಾಧಿಸಿದ್ದಾರೆ. 65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು. ಆ ಮೂಲಕ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಂಟ್ಟಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 6ನೇ ಪದಕವಾಗಿದೆ. '

ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕುಸ್ತಿಪಟು ಬಜರಂಗ್ ಪುನಿಯಾ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಅಲ್ಲದೆ ಈ ಸಾಧನೆಗೆ ಕಾರಣವಾದ ಬಜರಂಗ್ ಅವರ ದೃಢ ಸಂಕಲ್ಪ  ಮತ್ತು ಶ್ರಮವನ್ನು ಅವರು ಶ್ಲಾಘಿಸಿದರು.

ಬಳಿಕ ಟ್ವಿಟರ್ ನಲ್ಲೂ ತನ್ನ ಸಂತಸ ಹಂಚಿಕೊಂಡಿರುವ ಪ್ರಧಾನಿ ಮೋದಿ, ಟೋಕಿಯೋದಿಂದ ಸಂತೋಷಕರ ಸುದ್ದಿ ಬಂದಿದ್ದು, ಭಾರತಕ್ಕೆ ಕಂಚಿನ ಪದಕ ಒಲಿದಿದೆ. ಭಜರಂಗ ಪುನಿಯಾ ಅದ್ಭುತವಾಗಿ ಹೋರಾಡಿದ್ದಾರೆ. ನಿಮ್ಮ ಸಾಧನೆಗಾಗಿ ನಿಮಗೆ ಅಭಿನಂದನೆಗಳು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ಮತ್ತು ಸಂತೋಷವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.  
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com