ಪ್ರಧಾನಿ ಭೇಟಿಯಾದ ಅಸ್ಸಾಂ ಮುಖ್ಯಮಂತ್ರಿ: ಮಿಜೋರಾಂ ಗಡಿ ಸಮಸ್ಯೆ ಕುರಿತು ಚರ್ಚೆ

ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅಸ್ಸಾಂ- ಮಿಜೋರಾಂ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಿದರು.
ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ
ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅಸ್ಸಾಂ- ಮಿಜೋರಾಂ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಂತ ಬಿಸ್ವಾ ಶರ್ಮಾ ಅವರನ್ನು ನವದೆಹಲಿಗೆ ಕರೆದಿರುವುದಾಗಿ ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿತ್ತು.

ಇದಕ್ಕೂ ಮುನ್ನ, ಅಸ್ಸಾಂ ಬಿಜೆಪಿ ಸಂಸದರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹಿಮಾಂತ ಬಿಸ್ವಾ ಶರ್ಮಾ ಭೇಟಿ ಮಾಡಿ, ನೆರೆಯ ರಾಜ್ಯ ಮಿಜೋರಾಂ ನಡುವಣ ಗಡಿ ವಿವಾದ ಕುರಿತಂತೆ   ಚರ್ಚೆ ನಡೆಸಿದರು.

ಜುಲೈ 26 ರಂದು ಉಭಯ ರಾಜ್ಯಗಳ ನಡುವಿನ ಗಡಿ ವಿಚಾರಕ್ಕೆ ಬಂಧಿಸಿದಂತೆ ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಅಸ್ಸಾಂನ ಆರು ಪೊಲೀಸರು ಹಾಗೂ ಓರ್ವ ನಾಗರಿಕ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಕನಿಷ್ಠ  50 ಮಂದಿ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com