ಜಮ್ಮು-ಕಾಶ್ಮೀರದಲ್ಲಿ 30 ವರ್ಷಗಳಲ್ಲಿ 5, 886 ಭದ್ರತಾ ಸಿಬ್ಬಂದಿ ಹುತಾತ್ಮ

1989 ರಿಂದ ಆಗಸ್ಟ್ 5, 2019ರವರೆಗೆ ಜಮ್ಮು- ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಗಳಲ್ಲಿ 5,886 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ಲೋಕಸಭೆಯಲ್ಲಿ ಮಂಗಳವಾರ ತಿಳಿಸಿದರು.
ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ
ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು- ಕಾಶ್ಮೀರದಲ್ಲಿ 30 ವರ್ಷಗಳಲ್ಲಿ 5, 886 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.  1989 ರಿಂದ ಆಗಸ್ಟ್ 5, 2019ರವರೆಗೆ ಜಮ್ಮು - ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಗಳಲ್ಲಿ 5,886 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ  ಎಂದು ಗೃಹ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ಲೋಕಸಭೆಯಲ್ಲಿ ಮಂಗಳವಾರ ತಿಳಿಸಿದರು.

ಸಂವಿಧಾನದ 370 ನೇ ವಿಧಿ ರದ್ದತಿಗೂ ಮುನ್ನ ಜಮ್ಮು- ಕಾಶ್ಮೀರದಲ್ಲಿ ನಡೆದ ಭದ್ರತಾ ಸಿಬ್ಬಂದಿ ಹತ್ಯೆಗೆ ಸಂಬಂಧಿಸಿದ ಮಾಹಿತಿಯನ್ನು ಲಿಖಿತ ಪ್ರತಿಕ್ರಿಯೆ ನೀಡಿದ ರೈ,  ಜಮ್ಮು- ಕಾಶ್ಮೀರ ಉಗ್ರರಿಂದ ಹಿಂಸಾಚಾರ ಪೀಡಿತವಾಗಿದೆ. ಅದನ್ನು ಗಡಿಯುದ್ದಕ್ಕೂ ಬೆಂಬಲಿಸಲಾಗುತ್ತಿದೆ.  ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ (1989ರಿಂದ ಆಗಸ್ಟ್ 5, 2019 ರವರೆಗೆ) 5,886 ಭದ್ರತಾ ಸಿಬ್ಬಂದಿ ಭಯೋತ್ಪಾದನಾ ಘಟನೆಗಳಲ್ಲಿ ಹುತಾತ್ಮರಾಗಿರುವುದಾಗಿ ತಿಳಿಸಿದರು.

ಭದ್ರತಾ ಪಡೆಗಳಿಗೆ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಹುತಾತ್ಮ ಭದ್ರತಾ ಪಡೆಯ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com