ಅಶ್ಲೀಲ ಚಿತ್ರ ಪ್ರಕರಣ: ತನಿಖೆಗಾಗಿ ಮುಂಬೈ ಕ್ರೈಂ ಬ್ರಾಂಚ್ ನಿಂದ ಎಸ್ ಐಟಿ ರಚನೆ
ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
Published: 13th August 2021 12:39 PM | Last Updated: 13th August 2021 01:17 PM | A+A A-

ಉದ್ಯಮಿ ರಾಜ್ ಕುಂದ್ರಾ
ಮುಂಬೈ: ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಶ್ರೇಣಿಯ ಅಧಿಕಾರಿಯೊಬ್ಬರು ಈ ಪ್ರಕರಣದಲ್ಲಿ ಎಸ್‌ಐಟಿ ತಂಡವನ್ನು ಮುನ್ನಡೆಸಲಿದ್ದಾರೆ. ಹೊಸದಾಗಿ ರೂಪುಗೊಂಡ ಎಸ್‌ಐಟಿ ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ತನಿಖೆ ಮಾಡಲಿದೆ. ತಂಡವು ಕ್ರೈಂ ಬ್ರಾಂಚ್‌ನ ಉನ್ನತ ಅಧಿಕಾರಿಗಳಿಗೆ ವರದಿ ಮಾಡುತ್ತದೆ ಎಂದು ಹೇಳಲಾಗಿದೆ.
ಇನ್ನು ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳ ನಿರ್ಮಾಣ ಆರೋಪದ ಮೇಲೆ ಜುಲೈ 19 ರಂದು ಇತರೆ 11 ಜನರೊಂದಿಗೆ ಬಂಧಿಸಲಾಗಿತ್ತು. ಉದ್ಯಮಿ ರಾಜ್ ಕುಂದ್ರಾ ಮತ್ತು ರಯಾನ್ ಥಾರ್ಪೆ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ರಿಮಾಂಡ್ ಆದೇಶವನ್ನು ಪ್ರಶ್ನಿಸಿ ಮತ್ತು ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಕಳೆದ ಶನಿವಾರ ವಜಾಗೊಳಿಸಿತ್ತು.