ಸೋನಿಯಾ ಗಾಂಧಿ ಕರೆದ ಪ್ರತಿಪಕ್ಷ ನಾಯಕರ ವರ್ಚುವಲ್ ಸಭೆಯಲ್ಲಿ ಟಿಎಂಸಿ ಭಾಗಿ ಸಾಧ್ಯತೆ
ಆಗಸ್ಟ್ 20ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಗೆ ತೃಣಮೂಲ ಕಾಂಗ್ರೆಸ್ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಟಿಮ ಬಂಗಾಳ ಮುಖ್ಯಮಂತ್ರಿ...
Published: 13th August 2021 05:59 PM | Last Updated: 13th August 2021 05:59 PM | A+A A-

ಮಮತಾ ಬ್ಯಾನರ್ಜಿ
ಕೋಲ್ಕತಾ: ಆಗಸ್ಟ್ 20ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಗೆ ತೃಣಮೂಲ ಕಾಂಗ್ರೆಸ್ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜಕೀಯ ಆಪ್ತರು ಖಚಿತಪಡಿಸಿದ್ದಾರೆ.
ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಟಿಎಂಸಿ ಭಾಗವಹಿಸುವ ಸಾಧ್ಯತೆ ಇದೆ.
ವಿರೋಧ ಪಕ್ಷದ ನಾಯಕರು, ನ್ಯಾಯಾಧೀಶರು ಮತ್ತು ಪತ್ರಕರ್ತರ ಫೋನ್ ಕದ್ದಾಲಿಕೆ ಪ್ರಕರಣ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದ ಬೆನ್ನಲ್ಲೇ ಸೋನಿಯಾ ಗಾಂಧಿ ಅವರು ಈ ಸಭೆ ಕರೆದಿದ್ದಾರೆ.
ಸಭೆಯ ಕಾರ್ಯಸೂಚಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ವಿರೋಧ ಪಕ್ಷಗಳ ಒಗ್ಗಟ್ಟಾಗಲು ಈ ಸಭೆ ಸಹಾಯ ಮಾಡುವುದರ ಜೊತೆಗೆ ವಿರೋಧ ಪಕ್ಷಗಳನ್ನು ಕೆರಳಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ ಡಿಎಂಕೆ, ಎನ್‌ಸಿಪಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ಸೇರಿದಂತೆ ಹಲವು ಪ್ರತಿಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ.