ಸ್ವಾತಂತ್ರ್ಯ ದಿನಾಚರಣೆ: ದಾಳಿಗೆ ಸಂಚು ರೂಪಿಸಿದ್ದ 4 ಜೆಇಎಂ ಉಗ್ರರ ಬಂಧನ, ತಪ್ಪಿದ ಭಾರೀ ವಿಧ್ವಂಸಕ ಕೃತ್ಯ

ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಈ ಮೂಲಕ ದೊಡ್ಡ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ. 

ಕಾಶ್ಮೀರದಲ್ಲಿದ್ದ ಜೆಇಎಂ ಅಡಗುತಾಣಗಳ ಮೇಲೆ ಇಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ಕರಾಳ ದಿನವನ್ನಾಗಿ ಮಾಡುವ ಉದ್ದೇಶ ಹೊಂದಿದ್ದ ಈ ಬಂಧಿತ ಉಗ್ರರು, ಇದಕ್ಕಾಗಿ ಜಮ್ಮುವಿನಲ್ಲಿ ವಾಹನದಲ್ಲಿ ಐಇಡಿ ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದರು ಎಂದು ಜಮ್ಮುವಿನ ಐಜಿಪಿ ಮಾಹಿತಿ ನೀಡಿದ್ದಾರೆ. 

ಬಂಧಿತ ನಾಲ್ವರು ಉಗ್ರರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಈ ಉಗ್ರರು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದರು. ಅಲ್ಲದೇ, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಡ್ರೋಣ್ ಮೂಲಕ ಕಾಶ್ಮೀರದಲ್ಲಿರುವ ಉಗ್ರರಿಗೆ ರವಾನಿಸುತ್ತಿದ್ದರು. ನಾಲ್ವರು ಉಗ್ರರ ಬಂಧನದಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com