ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕ್ರಮಗಳೇನು?: ವಿವರಣೆ ಕೋರಿ ಫೇಸ್ ಬುಕ್ ಗೆ ಮಕ್ಕಳ ಹಕ್ಕು ಆಯೋಗ ಆದೇಶ!

ಅತ್ಯಾಚಾರಕ್ಕೀಡಾದ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಷಿಯಲ್ ಮೀಡಿಯಾದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿರುವ ಎನ್ ಸಿಪಿಸಿಆರ್, ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ವರದಿ ಕೇಳಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಅತ್ಯಾಚಾರಕ್ಕೀಡಾದ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಷಿಯಲ್ ಮೀಡಿಯಾದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿರುವ ಎನ್ ಸಿಪಿಸಿಆರ್, ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ವರದಿ ಕೇಳಿದೆ.

ಫೇಸ್ ಬುಕ್ ಇಂಡಿಯಾ(ನಂಬಿಕೆ ಮತ್ತು ಸುರಕ್ಷತೆ) ಮುಖ್ಯಸ್ಥ ಸತ್ಯ ಯಾದವ್ ಅವರು ಆಯೋಗದ ಮುಂದೆ ಆಗಸ್ಟ್ 17ರಂದು ಸಂಜೆ 5 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ಮಕ್ಕಳ ಹಕ್ಕು ಆಯೋಗ ನೊಟೀಸ್ ನೀಡಿದೆ. ಈ ಮೂಲಕ ಫೇಸ್ ಬುಕ್ ಮುಖ್ಯಸ್ಥರು ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ವಿವರಿಸಬೇಕಾಗುತ್ತದೆ.

ರಾಹುಲ್ ಗಾಂಧಿಯವರ ಇನ್ಸ್ಟ್ರಾಗ್ರಾಮ್ ಖಾತೆಯಿಂದ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋಗಳನ್ನು ತೆಗೆದುಹಾಕುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಫೇಸ್ ಬುಕ್ ನ್ನು ಒತ್ತಾಯಿಸಿ ಪತ್ರ ಬರೆದಿದೆ. ಜೆಜೆ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಇಂಡಿಯಾಗೆ ಆಯೋಗ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com