75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ: ದೆಹಲಿಯಲ್ಲಿ ಹೆಚ್ಚಿದ ಭದ್ರತೆ, ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣವನ್ನು ಸೃಷ್ಟಿ ಮಾಡಿದೆ. ಈ ನಡುವೆ ಯಾವುದೇ ಅಹಿತಕ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. 
ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ
ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ

ನವದೆಹಲಿ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣವನ್ನು ಸೃಷ್ಟಿ ಮಾಡಿದೆ. ಈ ನಡುವೆ ಯಾವುದೇ ಅಹಿತಕ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. 

ಕಳೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ರೈತರು ನಡೆಸಿದ್ದ ಟ್ರ್ಯಾಕ್ಟರ್​ ರ‍್ಯಾಲಿ ಹಿಂಸಾಚಾರದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಹೀಗಾಗಿ ಈ ಬಾರಿ ಯಾವುದೇ ರೀತಿಯ ಘಟನೆಗಳು ಅವಕಾಶ ಮಾಡಿಕೊಡದ ರೀತಿಯಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. 

ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕೆಂಪುಕೋಟೆಯಿಂದ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಕಳೆದ ವರ್ಷ ಗಣರಾಜ್ಯೋತ್ಸವ ಸಮಾರಂಭದ ನಂತರ ರೈತರ ಟ್ರ್ಯಾಕ್ಟರ್​ ರ‍್ಯಾಲಿ ದೆಹಲಿಯ ಕೆಂಪುಕೋಟೆ ತಲುಪಿತ್ತು. ಈ ವರ್ಷವೂ ಅಂಥ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಭಯೋತ್ಪಾದಕ ದಾಳಿಯ ಬೆದರಿಕೆಯೂ ಪೊಲೀಸರ ಈ ಕ್ರಮಕ್ಕೆ ಕಾರಣವಾಗಿದೆ.

ಎನ್‌ಎಸ್‌ಜಿ, ಸೆಕ್ಯುರಿಟಿ ರಿಂಗ್, ಎಸ್ಡಬ್ಲ್ಯೂಎಟಿ ಕಮಾಂಡರ್ಸ್ ಸೇರಿದಂತೆ ಹಲವು ಭದ್ರತೆ ನೀಡಲಾಗಿದೆ. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ. 350ಕ್ಕೂ ಹೆಚ್ಚು ಕ್ಯಾಮರಾಗಳನ್ನು ಅಳವಡಿಸಲಾಗಿದೆ. 5 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನೇತಾಜಿ ಸುಭಾಷ್ ಮಾರ್ಗ, ಲೋಥಿಯನ್ ರಸ್ತೆ, ಎಸ್‌ಪಿ ಮುಖರ್ಜಿ ಮಾರ್ಗ, ಚಾಂದಿನಿ ಚೌಕ ರಸ್ತೆ, ನಿಶಾದ್ ರಾಜ್ ಮಾರ್ಗ, ಲಿಂಕ್ ರಸ್ತೆಯಿಂದ ನೇತಾಜಿ ಸುಭಾಷ್ ಮಾರ್ಗ, ರಿಂದ ರಸ್ತೆಯಿಂದ ರಾಜ್‌ಘಾಟ್ ಬಳಿಕ ಐಎಸ್‌ಬಿಟಿ ಹಾಗೂ ಔಟರ್ ರಿಂಗ್ ರಸ್ತೆ, ಐಪಿ ಫ್ಲೈಓವರ್ ಪ್ರದೇಶಗಳಲ್ಲಿ ಇಂದು ಬೆಳಗಿನ ಜಾವ 4 ರಿಂದಲೇ ರಸ್ತೆಗಳನ್ನು ಬಂದ್ ಮಾಡಲಾಗಿದೆ. 

ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ!
ಈ ನಡುವೆ 74ನೇ ಸ್ವಾತಂತ್ರ್ಯೋವತ್ಸ ಅಂಗವಾಗಿ ಪ್ರಧಾನಿ ಮೋದಿ ನವದೆಹಲಿಯಲ್ಲಿರುವ ರಾಜ್‌ಘಾಟ್‌ ತಲುಪಿದ್ದು, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ರಾಜ್‌ಘಾಟ್‌ಗೆ ಏಕಾಂಗಿಯಾಗಿ ತೆರಳಿದ ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಇಲ್ಲಿಂದ ನೇರವಾಗಿ ಕೆಂಪು ಕೋಟೆಗೆ ತೆರಳಿದರು.

ಇನ್ನು ಕೆಂಪು ಕೋಟೆಯಲ್ಲಿ ಎಲ್ಲ ಸಿದ್ಧತೆಗಳೂ ಅಂತಿಮಗೊಂಡಿದ್ದು, ಆಮಂತ್ರಿತ ಎಲ್ಲಾ ಗಣ್ಯರೂ ಕೆಂಪು ಕೋಟೆಯಲ್ಲಿ ಪ್ರಧಾನಿ ಅವರ ಆಗಮನಕ್ಕೆ ಕಾದು ಕುಳಿತಿದ್ದಾರೆ .ಪ್ರಧಾನಿ ಮೋದಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com