ಕೇರಳದಲ್ಲಿ ಕೋವಿಡ್ ಆರ್ಭಟ: ಇಂದು ಮತ್ತೆ 18 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆ

ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ 18 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊಚ್ಚಿ: ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ 18 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಕೇರಳದಲ್ಲಿ ಭಾನುವಾರ 18,582 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 36.69 ಲಕ್ಷಕ್ಕೆ ಏರಿಕೆಯಾಗಿದೆ. ಅಂತೆಯೇ ಭಾನುವಾರ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 102 ಸಾವು ಸಂಭವಿಸಿದ್ದು, ಆ ಮೂಲಕ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 18,601ಕ್ಕೆ  ಏರಿಕೆಯಾಗಿದೆ.  ಕಳೆದ 24 ಗಂಟೆಗಳ ಅವಧಿಯಲ್ಲಿ 20,829 ಜನರು ಸೋಂಕಿನಿಂದ ಗುಣಮುಖರಾಗಿದ್ದು ಆ ಮೂಲಕ ಒಟ್ಟು ಗುಣಮುಖರ ಪ್ರಮಾಣ 34,92,367ಕ್ಕೆ ಏರಿಕೆಯಾಗಿದೆ. 

ಕೇರಳದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 1,78,630 ಕ್ಕೆ ತಲುಪಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.

ಇನ್ನು ಕೇರಳದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,22,970 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟು 2,94,57,951 ಪರೀಕ್ಷೆಗಳನ್ನು ನಡೆಸಲಾಗಿದೆ. ಕೇರಳದಲ್ಲಿ ಪ್ರಸ್ತುತ ಪಾಸಿಟಿವಿಟಿ ದರ 15.11ಕ್ಕೆ ಏರಿಕೆಯಾಗಿದೆ. ಮಲಪ್ಪುರಂನಲ್ಲಿ ಅತೀ ಹೆಚ್ಚು ಅಂದರೆ 2681, ತ್ರಿಶೂರ್ 2423, ಕೋಳಿಕ್ಕೋಡ್ 2368,  ಎರ್ನಾಕುಲಂ 2161, ಪಾಲಕ್ಕಾಡ್ 1771, ಕಣ್ಣೂರು 1257, ಕೊಲ್ಲಂ 1093, ಆಲಪ್ಪುಳ 941, ಕೊಟ್ಟಾಯಂ 929 ಮತ್ತು ತಿರುವನಂತಪುರಂನಲ್ಲಿ 927 ಸೋಂಕು ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com