ಸ್ವತಂತ್ರ ಭಾರತದ ಅಮೃತ ಘಳಿಗೆಯು ದೇಶದ ಜನರಲ್ಲಿ ಹೊಸ ಶಕ್ತಿ ತುಂಬಲಿ: 75ನೇ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಬ್ರಿಟೀಷರ ದಾಸ್ಯದಿಂದ ಬಿಡುಗಡೆಗೊಂಡು ಅನುಭವಿಸಿದ ಸ್ವಾತಂತ್ರ್ಯದ ಕ್ಷಣಗಳಿಗೆ ಭಾನುವಾರ 75 ವರ್ಷದ ಸಂಭ್ರಮ. ಈ ಅಮೃತ ಮಹೋತ್ಸವದ ಹರ್ಷಾಚರಣೆ ದೇಶದೆಲ್ಲೆಡೆ ಹಬ್ಬದ ವಾತಾವರಣ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲರಿಗೂ 75ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ. 

ಈ ವರ್ಷ ಅಮೃತ ಹಬ್ಬದ ಸ್ವಾತಂತ್ರ್ಯೋತ್ಸವವು ದೇಶದ ಜನರಲ್ಲಿ ಹೊಸ ಶಕ್ತಿ ಹಾಗೂ ನವಚೈತನ್ಯವನ್ನು ತುಂಬಲಿ ಎಂದು ಶುಭ ಹಾರೈಸಿದ್ದಾರೆ. 

75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಅವರ ಸತತ 8ನೇ ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ. ಮೋದಿಯವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಬಳಿಕ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಭಾಷಣ ಆರಂಭಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com