ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಹೊಸ ಸಮನ್ಸ್ 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬುಧವಾರ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಅನಿಲ್ ದೇಶಮುಖ್
ಅನಿಲ್ ದೇಶಮುಖ್

ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬುಧವಾರ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

71 ವರ್ಷದ ಎನ್ ಸಿಪಿ ಮುಖಂಡ ಅನಿಲ್ ಅವರಿಗೆ ಸುಪ್ರೀಂಕೋರ್ಟ್ ಮದ್ಯಂತರ ಜಾಮೀನು ನಿರಾಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಆಗಸ್ಟ್ 18 ರಂದು ದಕ್ಷಿಣ ಮುಂಬೈನ ಇಡಿ ಕಚೇರಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ದೇಶ್ ಮುಖ್ ಅವರಿಗೆ ಸೂಚಿಸಲಾಗಿದೆ. ಐದನೇ ಬಾರಿಗೆ ನೋಟಿಸ್ ನೀಡಲಾಗಿತ್ತು.

ಈ ಪ್ರಕರಣದಲ್ಲಿ ಮತ್ತಷ್ಟು ಹೇಳಿಕೆಯನ್ನ ದಾಖಲಿಸಲು ಸಂಸ್ಥೆ ಬಯಸಿದ್ದರಿಂದ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಯಮಗಳ ಅಡಿಯಲ್ಲಿ ಇದನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದ ವಿಚಾರಣೆಗಾಗಿ ದೇಶಮುಖ್ ಕೊನೆಯದಾಗಿ ಹಾಜರಾಗುವುದನ್ನು ಬಿಟ್ಟು, ಇಡಿ ಕ್ರಮವನ್ನು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ. ಇಡಿಗೆ ಹಾಜರಾಗದ ಅನಿಲ್ ದೇಶಮುಖ್ ಅವರ ಪತ್ನಿ ಮತ್ತು ಪುತ್ರನಿಗೂ  ಇಡಿ ಸಮನ್ಸ್ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com