ಪೆಗಾಸಸ್ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್; 10 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ

ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಭಾರತದ ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 10 ದಿನಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. 

ವಿಚಾರಣೆ ವೇಳೆ ನ್ಯಾಯಪೀಠ, ನ್ಯಾಯಾಲಯದಿಂದ ಮುಚ್ಚಿಡಲು ಏನೂ ಇಲ್ಲ. ಇಸ್ರೇಲಿ ಸ್ಪೈವೇರ್ ಅನ್ನು ಪ್ರತ್ಯೇಕ ಫೋನ್ ಗಳಲ್ಲಿ ಬಳಸಲಾಗಿದೆ ಎಂಬ ಆರೋಪಗಳಿಗೆ ಸರ್ಕಾರ ಉತ್ತರಿಸಬೇಕು ಎಂದು ಹೇಳಿದೆ. 

ಕೇಂದ್ರದ ಪ್ರತಿಕ್ರಿಯೆಯನ್ನು ಪಡೆದ ನಂತರವೇ ಆರೋಪಗಳ ತನಿಖೆಗೆ ಸಮಿತಿಯನ್ನು ರಚಿಸುವುದನ್ನು ನಿರ್ಧರಿಸಲಾಗುತ್ತದೆ ಎಂದೂ ನ್ಯಾಯಾಲಯ ತಿಳಿಸಿದೆ. 

"ರಾಷ್ಟ್ರೀಯ ಭದ್ರತೆಗೆ ರಾಜಿಯಾಗುವುದನ್ನು ನಾವು ಬಯಸುವುದಿಲ್ಲ, ಆದರೆ ಅವರ ಆರೋಪದ ಪ್ರಕಾರ ವ್ಯಕ್ತಿಗಳ ಫೋನ್‌ಗಳ ಮೇಲೆ ದಾಳಿ ಮಾಡಲಾಗಿದೆ. ಸಮರ್ಥ ಪ್ರಾಧಿಕಾರ ಮಾತ್ರ ಅದಕ್ಕೆ ಪ್ರತಿಕ್ರಿಯಿಸಬಹುದು" ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

ವಿವಾದ ಸಂಬಂಧ ನಿನ್ನೆಯಷ್ಟೇ ಸುಪ್ರೀಂಕೋರ್ಟ್'ಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಪ್ರತಿಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರನ್ನು ಗುರಿಯಾಗಿಸಲು ಇಸ್ರೇಲಿ ಕಂಪನಿ. ಪೆಗಾಸಸ್ ಸ್ಪೈವೇರ್ ಅನ್ನು ಬಳಸಲಾಗಿದೆ ಎಂಬ ಇತ್ತೀಚಿನ ವರದಿಗಳಿಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. 

ಪಟ್ಟಭದ್ರ ಹಿತಾಸಕ್ತಿಗಳಿಂದ ಹರಡಿರುವ ಯಾವುದೇ ತಪ್ಪು ನಿರೂಪಣೆಯನ್ನು ಹೋಗಲಾಡಿಸಲು ಮತ್ತು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಶೀಲಿಸುವುದ್ಕಕಾಗಿ ನಾವು ತಜ್ಞರ ಸಮಿತಿಯನ್ನು ರಚಿಸುತ್ತೇವೆ. ಅದು ಸಮಸ್ಯೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಲಿದೆ ಎಂದು ಹೇಳಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com