ಸೆಪ್ಟೆಂಬರ್ ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ: ಎನ್ಐವಿ ನಿರ್ದೇಶಕಿ ಪ್ರಿಯಾ ಅಬ್ರಹಂ

ಸೆಪ್ಟೆಂಬರ್ ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ನಿರ್ದೇಶಕಿ ಪ್ರಿಯಾ ಅಬ್ರಹಂ ಹೇಳಿದ್ದಾರೆ.
ಮಕ್ಕಳಿಗೆ ಕೋವಿಡ್ ಲಸಿಕೆ
ಮಕ್ಕಳಿಗೆ ಕೋವಿಡ್ ಲಸಿಕೆ

ನವದೆಹಲಿ: ಸೆಪ್ಟೆಂಬರ್ ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ನಿರ್ದೇಶಕಿ ಪ್ರಿಯಾ ಅಬ್ರಹಂ ಹೇಳಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಒಟಿಟಿ ವೇದಿಕೆಯಾದ ಭಾರತ ವಿಜ್ಞಾನಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಿಯಾ ಅಬ್ರಹಾಂ ಅವರು ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆಗಳು ಲಭ್ಯವಾಗಬಹುದು. 2 ರಿಂದ 18 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಪ್ರಯೋಗಗಳು ನಡೆಯುತ್ತಿವೆ  ಎಂಜು ಹೇಳಿದ್ದಾರೆ. 

'2 ರಿಂದ 18 ವರ್ಷ ವಯಸ್ಸಿನವರಿಗೆ 2/3 ಹಂತದ  ಕ್ಲಿನಿಕಲ್ ಪ್ರಯೋಗಗಳು ನಡೆಯುತ್ತಿವೆ. ಈ ಲಸಿಕಾ ಪ್ರಯೋಗದ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗುತ್ತವೆ. ಅವುಗಳನ್ನು ನಿಯಂತ್ರಕರಿಗೆ ನೀಡಲಾಗುವುದು. ಬಹುಶಃ ಸೆಪ್ಟೆಂಬರ್ ಅಥವಾ ಸೆಪ್ಟೆಂಬರ್ ನಂತರ, ನಾವು ಮಕ್ಕಳಿಗೆ ಲಸಿಕೆ ನೀಡಬಹುದು. ಅದು  ಕೊವಾಕ್ಸಿನ್ ಆಗಿರಬಹುದು ಎಂದು ಪ್ರಿಯಾ ಅಬ್ರಹಂ ಹೇಳಿದರು.

ಮಕ್ಕಳ ಮೇಲಿನ ಲಸಿಕಾ ಪ್ರಯೋಗ ಕಾರ್ಯದಲ್ಲಿ ಝೈಡಸ್ ಕ್ಯಾಡಿಲಾ ಲಸಿಕೆ ಪ್ರಯೋಗಗಳು ನಡೆಯುತ್ತಿವೆ. ಆ ಲಸಿಕೆಗಳು ಸಹ ಲಭ್ಯವಾಗಬಹುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com