ಅಸಹಜ ಸೆಕ್ಸ್ ಗೆ ಒತ್ತಾಯ: ಪತಿ ವಿರುದ್ಧ ಮುಂಬೈ ಎಂಎನ್ ಸಿ ಉದ್ಯೋಗಿ ಆರೋಪ, ಎಫ್‌ಐಆರ್ ದಾಖಲು
40 ವರ್ಷದ ಮಹಿಳೆಯೊಬ್ಬರು ಪ್ರತಿಷ್ಠಿತ ಹಣಕಾಸು ಸಂಸ್ಥೆಯ ಉಪಾಧ್ಯಕ್ಷರಾಗಿರುವ ತನ್ನ ಪತಿ ವಿರುದ್ಧ ತನ್ನನ್ನು ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ...
Published: 19th August 2021 08:05 PM | Last Updated: 20th August 2021 01:03 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: 40 ವರ್ಷದ ಮಹಿಳೆಯೊಬ್ಬರು ಪ್ರತಿಷ್ಠಿತ ಹಣಕಾಸು ಸಂಸ್ಥೆಯ ಉಪಾಧ್ಯಕ್ಷರಾಗಿರುವ ತನ್ನ ಪತಿ ವಿರುದ್ಧ ತನ್ನನ್ನು ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಮತ್ತು ಆಕೆಯ ಅತ್ತೆ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಮಲ್ಟಿ-ನ್ಯಾಷನಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತ ಮಹಿಳೆ ಮುಂಬೈ ಉಪನಗರದಲ್ಲಿರುವ ಪೊವಾಯಿ ಪೊಲೀಸ್ ಠಾಣೆದೆ ತನ್ನ ಪತಿ ಸೇರಿದಂತೆ ಆತನ ಕುಟುಂಬದ ಎಂಟು ಸದಸ್ಯರ ವಿರುದ್ಧ ದೂರು ನೀಡಿದ್ದಾರೆ.
ಮಹಿಳೆ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆಯ(ಐಪಿಸಿ) ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಆದರೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮೇ 2013 ರಲ್ಲಿ ತಮ್ಮ ಮದುವೆಯಾಗಿದ್ದು, ಮದುವೆಯ ನಂತರ, ಅತ್ತೆ, ಮಾವ ಮತ್ತು ಇತರ ಕುಟುಂಬ ಸದಸ್ಯರು ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದರು. ಪತಿ ಕೂಡ ಅವರನ್ನು ಬೆಂಬಲಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.
ತನ್ನ ಪತಿಯು ಅಸಹಜ ಲೈಂಗಿಕತೆಗೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತಿಯ ದಿನನಿತ್ಯದ ಕಿರುಕುಳ ಮತ್ತು ವರ್ತನೆಯಿಂದ ಬೇಸತ್ತು ಮಹಿಳೆ ದೂರು ನೀಡಿದ್ದಾರೆ. ಅವಳಿ ಮಕ್ಕಳ ತಾಯಿಯಾಗಿರುವ ಮಹಿಳೆ ಪ್ರಸ್ತುತ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.