ತಮಿಳುನಾಡಿನಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲ, ಸೋಮವಾರದಿಂದ ಚಿತ್ರಮಂದಿರಗಳು ಓಪನ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶನಿವಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲ ಮಾಡಿದ್ದು, ಇದನ್ನು ಸೆಪ್ಟೆಂಬರ್ 6 ರವರೆಗೆ ಎರಡು ವಾರಗಳವರೆಗೆ ವಿಸ್ತರಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶನಿವಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲ ಮಾಡಿದ್ದು, ಇದನ್ನು ಸೆಪ್ಟೆಂಬರ್ 6 ರವರೆಗೆ ಎರಡು ವಾರಗಳವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್ 1 ರಿಂದ ಎಲ್ಲಾ ಕಾಲೇಜುಗಳು ಪುನರಾರಂಭವಾಗಲಿವೆ. ಆಗಸ್ಟ್ 23 ರಿಂದ ಶೇ. 50 ವೀಕ್ಷಕರೊಂದಿಗೆ ಸಿನಿಮಾ ಥಿಯೇಟರ್‌ಗಳು ಕಾರ್ಯನಿರ್ವಹಿಸಬಹುದು, ಬೀಚ್‌ಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. 

ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ಸಾರ್ವಜನಿಕ ಸಾರಿಗೆಯನ್ನು ಪುನರಾರಂಭಿಸುವುದು ಸೇರಿದಂತೆ ಹಲವು ಪ್ರಮುಖ ಘೋಷಣೆಗಳನ್ನು ಸಿಎಂ ಮಾಡಿದ್ದಾರೆ.

ಸೆಪ್ಟೆಂಬರ್ 1 ರಿಂದ, 9, 10, 11 ಮತ್ತು 12 ತರಗತಿ ಶಾಲೆಗಳು ಪುನರಾರಂಭ.

ಸೆಪ್ಟೆಂಬರ್ 15 ರಿಂದ 1 ರಿಂದ 7 ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಸಮಾಲೋಚನೆಯ ನಂತರ ಪ್ರಕಟಣೆ ಹೊರಡಿಸಲಾಗುತ್ತದೆ.

ಎಲ್ಲಾ ಕಾಲೇಜುಗಳು ಸೆಪ್ಟೆಂಬರ್ 1 ರಿಂದ ರೊಟೇಷನ್ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತವೆ. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸಿರಬೇಕು.

ಸೆಪ್ಟೆಂಬರ್ 1 ರಿಂದ ಡಿಪ್ಲೊಮಾ ಕೋರ್ಸ್‌ಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಕಾರ್ಯನಿರ್ವಹಿಸಬಹುದು ಎಂದು ಸಿಎಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com