ಅಫ್ಘಾನಿಸ್ತಾನ ಬೆಳವಣಿಗೆಗಳ ಕುರಿತು ರಾಜಕೀಯ ಪಕ್ಷಗಳ ನಾಯಕರಿಗೆ ಕೇಂದ್ರ ಮಾಹಿತಿ

ಯುದ್ಧಪೀಡಿತ ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ.
ಕಾಬುಲ್ ನಗರದಲ್ಲಿ ಗನ್ ಹಿಡಿದು ಕಾವಲು ಕಾಯುತ್ತಿರುವ ತಾಲಿಬಾನಿಯರು
ಕಾಬುಲ್ ನಗರದಲ್ಲಿ ಗನ್ ಹಿಡಿದು ಕಾವಲು ಕಾಯುತ್ತಿರುವ ತಾಲಿಬಾನಿಯರು

ನವದೆಹಲಿ: ಯುದ್ಧಪೀಡಿತ ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ.

ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಅಫ್ಘಾನಿಸ್ತಾನ ಬೆಳವಣಿಗೆಗಳ ಕುರಿತು ಮಾಹಿತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ(ಎಂಇಎ) ಸೂಚನೆ ನೀಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ತಿಳಿಸಿದ್ದಾರೆ.

"ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸಂಕ್ಷಿಪ್ತವಾಗಿ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಮಾಹಿತಿ ನೀಡುವಂತೆ ಪ್ರಧಾನಿ ಮೋದಿ ಅವರು ಎಂಇಎಗೆ ಸೂಚಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಹೆಚ್ಚಿನ ವಿವರಗಳನ್ನು ನೀಡುತ್ತಾರೆ" ಎಂದು ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಕುರಿತು ಮತ್ತು ಆ ದೇಶದ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡುವ ನಿರೀಕ್ಷೆ ಇದೆ.

ಅಫ್ಘಾನಿಸ್ತಾನದಿಂದ ಅಮೆರಿಕ ಪಡೆಗಳನ್ನು ಹಿಂತೆಗೆದುಕೊಂಡ ನಂತರ ತಾಲಿಬಾನ್, ಕಾಬೂಲ್ ಸೇರಿದಂತೆ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಪಟ್ಟಣಗಳು ಮತ್ತು ನಗರಗಳ ಮೇಲೆ ಹಿಡಿತ ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com