ಕೊರೋನಾ ನಿಯಂತ್ರಣದಲ್ಲಿದೆ, ಚುನಾವಣಾ ಆಯೋಗ ತಕ್ಷಣ ಉಪಚುನಾವಣೆ ಘೋಷಿಸಬೇಕು: ಮಮತಾ ಬ್ಯಾನರ್ಜಿ

ಬಂಗಾಳದಲ್ಲಿ ಕೋವಿಡ್ -19 ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಪ್ರತಿಪಾದಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಚುನಾವಣಾ ಆಯೋಗವು ಬಾಕಿ ಇರುವ ರಾಜ್ಯದ ಏಳು ವಿಧಾನಸಭಾ ಸ್ಥಾನಗಳಿಗೆ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಬಂಗಾಳದಲ್ಲಿ ಕೋವಿಡ್ -19 ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಪ್ರತಿಪಾದಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಚುನಾವಣಾ ಆಯೋಗವು ಬಾಕಿ ಇರುವ ರಾಜ್ಯದ ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕಗಳನ್ನು ಘೋಷಿಸಬೇಕು ಎಂದು ಸೋಮವಾರ ಒತ್ತಾಯಿಸಿದ್ದಾರೆ.

ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಮೊಟಕುಗೊಳಿಸದಂತೆ ಚುನಾವಣಾ ಆಯೋಗ ನೋಡಿಕೊಳ್ಳಬೇಕು ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.

"ಈಗಾಗಲೇ ನಾಲ್ಕು ತಿಂಗಳುಗಳು ಕಳೆದಿದೆ ಮತ್ತು ಈಗ ಕೋವಿಡ್ -19 ಪರಿಸ್ಥಿತಿಯು ಸಂಪೂರ್ಣವಾಗಿ ನಿಯಂತ್ರಣದಲ್ಲಿರುವುದರಿಂದ, ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.... ಅವರು(ಇಸಿ) ತಕ್ಷಣ ಉಪ ಚುನಾವಣೆ ಘೋಷಿಸಬೇಕು ಎಂದಿದ್ದಾರೆ.

ನಾನು ಜನರ ಚುನಾವಣಾ ಪ್ರಜಾಪ್ರಭುತ್ವ ಹಕ್ಕುಗಳನ್ನು ಮೊಟಕುಗೊಳಿಸಬಾರದು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಏಳು ವಿಧಾನಸಭಾ ಕ್ಷೇತ್ರಗಳಾದ ಜಂಗೀಪುರ, ಸಂಶೆರ್‌ಗುಂಜ್, ಖರ್ಧಾ, ಭಬಾನಿಪುರ, ದಿನಹತಾ, ಶಾಂತಿಪುರ ಮತ್ತು ಗೋಶಬಗಳಲ್ಲಿ ಉಪಚುನಾವಣೆ ನಡೆಯಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com