ಅಮರಿಂದರ್ ಸಿಂಗ್ ವಿರುದ್ಧ ಪಂಜಾಬ್ ನ ಹಲವು ಶಾಸಕರು, ಸಚಿವರ ಬಂಡಾಯ

ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದ್ದು ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್
ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದ್ದು ಸಿಎಂ ವಿರುದ್ಧ ಹಲವು ಶಾಸಕರು ಹಾಗೂ ಸಚಿವರು ಬಂಡಾಯವೆದ್ದಿದ್ದಾರೆ.

2017 ರ ವಿಧಾನಸಭೆ ಚುನಾವಣೆಗೂ ಮುನ್ನ ಅಮರಿಂದರ್ ಸಿಂಗ್ ನೀಡಿದ್ದ ಭರವಸೆಗಳ ಪೈಕಿ ಯಾವುದೇ ಭರವಸೆಗಳೂ ಈಡೇರಿಲ್ಲದ ಕಾರಣ ಅವರ ನಾಯಕತ್ವದಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ನಾಲ್ವರು ಸಚಿವರು- ತ್ರಿಪ್ತ್ ರಾಜಿಂದರ್ ಸಿಂಗ್ ಬಾಜ್ವ, ಸುಖ್ಬಿಂದರ್ ಸಿಂಗ್ ಸರ್ಕಾರಿಯಾ, ಸುಖ್ಜಿಂದರ್ ಸಿಂಗ್ ರಾಂಧವಾ ಹಾಗೂ ಚರಣ್ ಜಿತ್ ಸಿಂಗ್ ಚನ್ನಿ ಹಾಗೂ ಇನ್ನು 24 ಮಂದಿ ಶಾಸಕರು ಸಿಎಂ ಅಮರಿಂದರ್ ಸಿಂಗ್ ವಿರುದ್ಧ ಸಭೆ ನಡೆಸಿದ್ದು ಅಗತ್ಯವಿದ್ದಲ್ಲಿ ಸಿಎಂ ಬದಲಾವಣೆಯ ನಿರ್ಧಾರವನ್ನೂ ಕೈಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಡ ಹೇರುವ ತಂತ್ರದ ಬಗ್ಗೆ ಚರ್ಚಿಸಿದ್ದಾರೆ.

ಪಂಜಾಬ್ ನಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳಿದ್ದು ಶಾಸಕ, ಸಚಿವರ ಈ ಬಂಡಾಯದಿಂದ ಈಗಾಗಲೇ ಕಾಂಗ್ರೆಸ್ ನಲ್ಲಿರುವ ಬಿಕ್ಕಟ್ಟು ಉಲ್ಬಣಗೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ  ಚರಣ್ ಜಿತ್ ಸಿಂಗ್,  ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸುವ ಪ್ರಕರಣದಲ್ಲಿ ನ್ಯಾಯ ಒದಗಿಸುವುದರಲ್ಲಿ ವಿಳಂಬ, ಡ್ರಗ್ಸ್ ಜಾಲದಲ್ಲಿರುವವರನ್ನು ಬಂಧಿಸುವುದು ಹಾಗೂ ವಿದ್ಯುತ್ ಖರೀದಿ ಒಪ್ಪಂದಗಳನ್ನು ರದ್ದುಗೊಳಿಸುವ ವಿಷಯದಲ್ಲಿ ಅಮರಿಂದರ್ ಸಿಂಗ್ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಅಮರಿಂದರ್ ಸಿಂಗ್ ನಾಯಕತ್ವವವನ್ನು ವಿರೋಧಿಸಿ, ದೂರು ನೀಡುವುದಕ್ಕೆ ಬಜ್ವಾ, ಸರ್ಕಾರಿಯಾ, ರಂಧವಾ ಹಾಗೂ ಪಂಜಾಬ್ ನ ಪ್ರಧಾನ ಕಾರ್ಯದರ್ಶಿ ಪ್ರಗತ್ ಸಿಂಗ್ ಹೈಕಮಾಂಡ್ ನ್ನು ಭೇಟಿ ಮಾಡಲಿದ್ದಾರೆ ಎಂದು ಚರಣ್ ಜಿತ್ ಸಿಂಗ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com