ಗುಜರಾತ್‌ನಲ್ಲಿ ಸೆಪ್ಟೆಂಬರ್ 2 ರಿಂದ 6-8ನೇ ತರಗತಿಗಳಿಗೆ ಶಾಲೆ ಆರಂಭ

ಕಡಿಮೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳ ನಡುವೆ, ಗುಜರಾತ್ ನಲ್ಲಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳು ಸೆಪ್ಟೆಂಬರ್ 2 ರಿಂದ ಆರಂಭವಾಗಲಿವೆ ಎಂದು ಗುಜರಾತ್ ಶಿಕ್ಷಣ ಸಚಿವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಾಂಧಿನಗರ: ಕಡಿಮೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳ ನಡುವೆ, ಗುಜರಾತ್ ನಲ್ಲಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳು ಸೆಪ್ಟೆಂಬರ್ 2 ರಿಂದ ಆರಂಭವಾಗಲಿವೆ ಎಂದು ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರಸಿಂಹ ಚೂಡಾಸಮ ಅವರು ಬುಧವಾರ ಹೇಳಿದ್ದಾರೆ.

ಏಪ್ರಿಲ್-ಮೇನಲ್ಲಿ ಆರಂಭವಾದ ಎರಡನೇ ಅಲೆಯ ನಂತರ ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕೆಲವು ನಿರ್ದಿಷ್ಟ ತರಗತಿಗಳಿಗೆ ಶಾಲೆಗಳನ್ನು ಆರಂಭಿಸಲಾಗಿದೆ. ಈಗ ಗುಜರಾತ್ ನಲ್ಲಿ 6 ರಿಂದ 8ನೇ ತರಗತಿಗಳಿಗೆ ಶಾಲೆ ಆರಂಭಿಸಲಾಗುತ್ತಿದೆ.

ಈಗ ಗುಜರಾತ್‌ನಲ್ಲಿ ಕೇವಲ 160 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ 8,15,091 ಸೋಂಕಿತರು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಮತ್ತು 10,079 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com