ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ.
Published: 25th August 2021 02:20 PM | Last Updated: 25th August 2021 07:33 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಗೂ ಮುಂಚಿತವಾಗಿ ಎಲ್ಲಾ ಶಾಲಾ ಶಿಕ್ಷಕರಿಗೂ ಆದ್ಯತೆ ಮೇರೆಗೆ ಲಸಿಕೆ ಹಾಕಲು ಪ್ರಯತ್ನಿಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೇಳಿಕೊಂಡಿರುವುದಾಗಿ ತಿಳಿಸಿದ್ದಾರೆ.
इस महीने हर राज्य को वैक्सीन उपलब्ध करवाने की योजना के अतिरिक्त 2 करोड़ से ज़्यादा वैक्सीन की डोज़ उपलब्ध कराई जा रही हैं।
— Mansukh Mandaviya (@mansukhmandviya) August 25, 2021
हमने सभी राज्यों से अनुरोध किया है कि 5 सितंबर को मनाये जाने वाले शिक्षक दिवस से पहले सभी स्कूली शिक्षकों को प्राथमिकता देकर वैक्सीन लगाने का प्रयास करें।
ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಲಸಿಕೆ ಪೂರೈಕೆ ಯೋಜನೆ ಹೊರತಾಗಿಯೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಲಸಿಕೆ ಲಭ್ಯವಿರುವಂತೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಾರ, ಈವರೆಗೂ 58.07 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ.