ಸೆಪ್ಟೆಂಬರ್ 5 ರೊಳಗೆ ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆ ಮೇಲೆ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವ ಸೂಚನೆ

ಈ ತಿಂಗಳು ರಾಜ್ಯಗಳಿಗೆ ಹೆಚ್ಚುವರಿಯಾಗಿ ಎರಡು ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್‌ಗಳನ್ನುಒದಗಿಸಲಾಗುತ್ತಿದ್ದು, ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಗೂ ಮುನ್ನ ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆ ಮೇಲೆ ಲಸಿಕೆ ಹಾಕುವಂತೆ ಕೇಂದ್ರ ಆರೋಗ್ಯ ಸಚಿವ ಸೂಚಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಈ ತಿಂಗಳು ರಾಜ್ಯಗಳಿಗೆ ಹೆಚ್ಚುವರಿಯಾಗಿ ಎರಡು ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್‌ಗಳನ್ನು
ಒದಗಿಸಲಾಗುತ್ತಿದ್ದು, ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಗೂ ಮುನ್ನ ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆ ಮೇಲೆ ಲಸಿಕೆ ಹಾಕುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

"ಈ ತಿಂಗಳಲ್ಲಿ ಪ್ರತಿ ರಾಜ್ಯಕ್ಕೂ ಲಸಿಕೆಗಳನ್ನು ಒದಗಿಸುವ ಯೋಜನೆಯ ಜೊತೆಗೆ, ಹೆಚ್ಚುವರಿಯಾಗಿ 2 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ ರಾಜ್ಯಗಳಿಗೆ ಲಭ್ಯವಾಗುತ್ತಿದೆ. ಶಿಕ್ಷಕರ ದಿನಾಚರಣೆಯ ಮೊದಲು ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕಲು ಪ್ರಯತ್ನಿಸುವಂತೆ ನಾವು ಎಲ್ಲಾ ರಾಜ್ಯಗಳಿಗೆ ವಿನಂತಿಸಿದ್ದೇವೆ ಎಂದು ಮಾಂಡವಿಯಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್‌ಡೌನ್‌ಗೆ ಮುನ್ನ ಕಳೆದ ವರ್ಷ ಮಾರ್ಚ್‌ನಲ್ಲಿ ದೇಶಾದ್ಯಂತ ಶಾಲೆಗಳನ್ನು ಮುಚ್ಚಲಾಗಿತ್ತು.

 ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೋವಿಡ್ -19 ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳನ್ನು ಪುನಃ ತೆರೆಯಲು
ಕೇಂದ್ರ ಅನುಮತಿ ನೀಡಿತ್ತು.

 ಹಲವು ರಾಜ್ಯಗಳು ಶಾಲೆಗಳನ್ನು ಭಾಗಶಃ ಪುನಃ ತೆರೆಯಲು ಆರಂಭಿಸಿದರೂ, ಏಪ್ರಿಲ್‌ನಲ್ಲಿ ಆಕ್ರಮಣಕಾರಿ
ಎರಡನೇ ಅಲೆ ದೇಶವನ್ನು ಅಪ್ಪಳಿಸಿದಾಗ ಮತ್ತೆ ಸಂಪೂರ್ಣವಾಗಿ ಬಂದ್ ಮಾಡಲಾಯಿತು.

ಈಗ ಕೋವಿಡ್ -19 ಪರಿಸ್ಥಿತಿಯಲ್ಲಿ ಸುಧಾರಣೆಯೊಂದಿಗೆ ಹಲವು ರಾಜ್ಯಗಳು ಮತ್ತೆ ಶಾಲೆಗಳನ್ನು ಆರಂಭಿಸಿವೆ. ಆದರೆ ಶಾಲಾ ಸಿಬ್ಬಂದಿ ಮತ್ತು ಶಿಕ್ಷಕರು ಸಂಪೂರ್ಣವಾಗಿ ಲಸಿಕೆ ಪಡೆಯದಿರುವ ಬಗ್ಗೆ ತೀವ್ರ ಕಳವಳ ವ್ಯಕ್ತವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com